ಸಂಪಾಜೆ: ಸುಳ್ಯ, ಕಡಬ ತಾಲೂಕಿನ ಎಲ್ಲೆಡೆ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ಇದೀಗ ಸಂಪಾಜೆಯಲ್ಲಿ ಕಾಡಾನೆ ದಾಳಿ ನಡೆಸುತ್ತಿರುವ ಬಗ್ಗೆ ವರದಿಯಾಗಿದೆ. ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಸಂಪಾಜೆ ಗ್ರಾಮದ
ಗಡಿಕಲ್ಲು ಗ್ರಾಮದಲ್ಲಿ ಕಾಡಾನೆ ನಡೆಸುತ್ತಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಗಡಿಕಲ್ಲು ಭಾಗದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ ಕಬ್ಬು, ಬಾಳೆ ತೋಟವನ್ನು ನಾಶ ಮಾಡುತ್ತಿದೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು, ಸ್ಥಳೀಯರು ಜಮಾಯಿಸಿ ಕಾಡಾನೆಯನನ್ನು ಕಾಡಿಗೆ ಅಟ್ಟಲು ಪ್ರಯತ್ನ ನಡೆಸುತ್ತಿದ್ದಾರೆ. ಕಳೆದ ಒಂದು ಗಂಟೆಗೂ ಹೆಚ್ಚು ಸಮಯದಿಂದ ಈ ಭಾಗದಲ್ಲಿ ಕಾಡಾನೆ ದಾಳಿ ನಡೆಸುತ್ತಿದ್ದು ಜನರು ಭಯ ಭೀತರಾಗಿದ್ದಾರೆ ಎಂದು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಿ.ಕೆ.ಹಮೀದ್ ಗೂನಡ್ಕ ತಿಳಿಸಿದ್ದಾರೆ.