ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಕೊಟ್ಟಿದ್ದು, ತುಟ್ಟಿ ಭತ್ಯೆಯನ್ನು ಶೇಕಡ 4ರಷ್ಟು ಹೆಚ್ಚಳ ಮಾಡಿದೆ.ಸರ್ಕಾರಿ ನೌಕರರ ಮೂಲ ವೇತನದ ಶೇಕಡ 31ರಷ್ಟಿದ್ದ ತುಟ್ಟಿ ಭತ್ಯೆಯನ್ನು ಶೇಕಡ 35ಕ್ಕೆ ಹೆಚ್ಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ಸರ್ಕಾರಿ ನೌಕರರಿಗೆ ಜನವರಿ 1,2023ರಿಂದಲೇ ತುಟ್ಟಿ ಭತ್ಯೆ ಹೆಚ್ಚಳ ಪೂರ್ವಾನ್ವಯವಾಗಲಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post