ಸುಳ್ಯ:ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಫ್ರೆಶರ್ಸ್ ಡೇ ಆಚರಣೆ ಕಾರ್ಯಕ್ರಮ ಕಾಲೇಜಿನ ಸಭಾಭವನದಲ್ಲಿ ನಡೆಯಿತು. ಋತಾಯು ಆಯುರ್ವೇದ ವೆಲ್ನೆಸ್ ಹೋಮ್, ಭಾರಧ್ವಜ್ ಆಶ್ರಮ್, ಸುಳ್ಯ ಇದರ ಸಂಸ್ಥಾಪಕಿ ಡಾ. ಯಶಸ್ವಿನಿ ಭಾರಧ್ವಜ್ ಮುಖ್ಯ ಅತಿಥಿಗಳಾಗಿ
ಕಾರ್ಯಕ್ರಮವನ್ನು ಉದ್ಘಾಟಿಸಿದರು ಸಮಾರಂಭದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ. ಸುರೇಶ ವಿ. ವಹಿಸಿದ್ದರು. ಕಾಲೇಜಿನ ಉಪಪ್ರಾಂಶುಪಾಲರು ಮತ್ತು ಡೀನ್ ಸ್ಟುಡೆಂಟ್ ಅಫೇರ್ಸ್
ಡಾ. ಶ್ರೀಧರ್ ಕೆ. ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಡೀನ್ ಅಕಾಡೆಮಿಕ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ. ಉಮಾಶಂಕರ್ ಕೆ.ಎಸ್. ವಿದ್ಯಾರ್ಥಿ ಸಂಘದ ಸಂಯೋಜಕರಾದ ಪ್ರೊ. ಸುಧೀರ್ ಕೆ.ವಿ., ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಶಾಂಕ್ ಬಿ. ಬೇಲೆಗದ್ದೆ, ಕಾರ್ಯದರ್ಶಿ ಸಂಜನ್ ಕುಮಾರ್, ಬೋಧಕ ಮತ್ತು ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿವೃಂದ ಉಪಸ್ಥಿತರಿದ್ದರು. ಶಶಾಂಕ್ ಬಿ. ಬೇಲೆಗದ್ದೆ ಸ್ವಾಗತಿಸಿ, ವಿದ್ಯಾರ್ಥಿನಿ ಶರಣ್ಯ ಪ್ರಾರ್ಥಿಸಿದರು, ಸಾಕ್ಷಿನ್ ರೈ ವಂದಿಸಿದರು. ವಿದ್ಯಾರ್ಥಿಗಳಾದ ಯೋಗೀಶ್ ಪ್ರಸಾದ್ ಹೊಳ್ಳ ಮತ್ತು ಕಿರಣ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಬಳಿಕ ಉಪನ್ಯಾಸ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.









