ಸುಳ್ಯ:ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾಲೇಜಿನ ಸಭಾಂಗಣದಲ್ಲಿ ನಡೆಸಲಾಯಿತು. ಮುಖ್ಯ ಅತಿಥಿಯಾಗಿದ್ದ ಕೆ.ವಿ.ಜಿ. ಡೆಂಟಲ್ ಕಾಲೇಜು ಮತ್ತು ಆಸ್ಪತ್ರೆಯ ಉಪಪ್ರಾಂಶುಪಾಲರು ಹಾಗೂ ಕಾಲೇಜಿನ ಓರಲ್ ಪಥಾಲಜಿ ಮತ್ತು ಮೈಕ್ರೋ ಬಯೋಲಜಿ ವಿಭಾಗ ಮುಖ್ಯಸ್ಥರಾದ ಡಾ. ಶೈಲಾ ಎಂ. ಪೈ ಮಾತನಾಡಿ ಮಹಿಳಾ ಸಬಲೀಕರಣ ಹಾಗೂ
ಮಹಿಳೆಯರು ಸ್ವತಂತ್ರವಾಗಿ ಬದುಕುವ ಕಲೆ ಹಾಗೂ ಆರೋಗ್ಯದ ಬಗ್ಗೆ ಕಾಳಜಿಯನ್ನು ವಹಿಸಿಕೊಳ್ಳಬೇಕು ಅಲ್ಲದೆ ವಿದ್ಯಾರ್ಥಿನಿಯರಿಗೆ ಹಣದ ಹೂಡಿಕೆ ಹಾಗೂ ಸರಕಾರದಿಂದ ಹೆಣ್ಣುಮಕ್ಕಳಿಗೆ ಕೊಡಮಾಡುವ ವಿವಿಧ ಸೌಲಭ್ಯವನ್ನು ಬಳಸಿಕೊಳ್ಳಬೆಕು ಎಂದು ಹೇಳಿದರು. ಮುಖ್ಯ ಅತಿಥಿಯಾಗಿದ್ದ ಇನ್ನರ್ವ್ಹೀಲ್ ಕ್ಲಬ್ ಸುಳ್ಯ ಇದರ ಅಧ್ಯಕ್ಷೆ ಚಿಂತನಾ ಸುಬ್ರಮಣ್ಯ ಅವರನ್ನು ಸನ್ಮಾನಿಸಲಾಯಿತು.

ಸನ್ಮಾನಿತರ ನೆಲೆಯಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಮಹಿಳೆಯರು ದೇಶದ ಅಭಿವೃದ್ಧಿಗೆ ಬೆನ್ನೆಲುಬಾಗಿ ನಿಲ್ಲಬೇಕು ಎಂದು ಹೇಳಿದರು.
ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಉಜ್ವಲ್ ಯು.ಜೆ. ಮಾತನಾಡಿ ಮಹಿಳೆಯರು ಸಶಕ್ತರಾಗಬೇಕು. ಪುರಾಣದಿಂದಲೇ ಇಡೀ ಜಗತ್ತು ತಾಯಿಯಿಂದಲೇ ಪ್ರಗತಿಯಾಗಿದೆ ಅದೇ ರೀತಿ ಮುಂದೆಯೂ ಮಹಿಳೆಯರು ಆತ್ಮ ವಿಶ್ವಾಸ ಧೈರ್ಯ ಹಾಗೂ ತಾಳ್ಮೆಯಿಂದ ಇಡೀ ಜಗತ್ತನ್ನು ಅಭಿವೃದ್ಧಿಯತ್ತ ಕೊಂಡುಯ್ಯುವಲ್ಲಿ ಸಹಭಾಗಿತ್ವ ವಹಿಸಬೇಕು ಎಂದು ಹೇಳಿದರು.
ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ಶ್ರೀಧರ್ ಕೆ ಮಾತಾನಾಡಿದರು. ಮಹಿಳಾ ದಿನಾಚರಣೆಯ ಅಂಗವಾಗಿ ಕಾಲೇಜಿನ ಬೋದಕ ಸಿಬ್ಬಂದಿಗಳ ವಿಭಾಗದಿಂದ ಡಾ. ಸವಿತಾ ಎಂ., ಪ್ರೊಫೆಸರ್ ಇಲೆಕ್ಟ್ರಾನಿಕ್ಸ್ & ಇಂಜಿನಿಯರಿಂಗ್ ವಿಭಾಗ ಮತ್ತು ಬೋದಕೇತರ ಸಿಬ್ಬಂದಿಗಳ ವಿಭಾಗದಿಂದ ದಮಯಂತಿ ಕೆ ಅವರನ್ನು ಸನ್ಮಾನಿಸಲಾಯಿತು. ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಬೋಧಕೇತರ ಸಿಬ್ಬಂದಿಯಾದ ಪ್ರಮಿಳಾ ಟಿ ಅವರಿಗೆ ಆರ್ಥಿಕ ಸಹಾಯಧನವನ್ನು ವಿತರಿಸಲಾಯಿತು. ಕೆಮಿಸ್ಟ್ರಿ ವಿಭಾಗದ ಮುಖ್ಯಸ್ಥರು ಡಾ. ಸುರೇಖಾ ಎಂ. ಅತಿಥಿಗಳನ್ನು ಪರಿಚಯಿಸಿದರು. ಸಿ.ಐ.ಸಿ.ಸಿ. ಅಧ್ಯಕ್ಷರಾದ ಡಾ. ಭಾಗ್ಯ ಹೆಚ್.ಕೆ. ಸ್ವಾಗತಿಸಿ, ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಪ್ರೊಫೆಸರ್ ಡಾ. ದಿವ್ಯ ಎ.ಕೆ. ವಂದಿಸಿದರು. ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿಯರಾದ ತೃಷಾಲಿ ಮತ್ತು ಮನಸ್ವಿ ಕೆ ಕಾರ್ಯಕ್ರಮ ನಿರೂಪಿಸಿದರು. ಪೂಜಾ ಮತ್ತು ಖುಷಿ ಪ್ರಾರ್ಥಿಸಿದರು. ಮಹಿಳಾ ದಿನಾಚರಣೆಯ ಪ್ರಯುಕ್ತ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಕಾರ್ಯಕ್ರಮದಲ್ಲಿ ಬೋದಕ, ಬೋದಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿನಿಯರು ಉಪಸ್ಥಿಸಿತರಿದ್ದರು.