ಪುಣೆ: ಐಸಿಸಿ ವಿಶ್ವ ಕಪ್ ಕ್ರಿಕೆಟ್ನಲ್ಲಿ ಇಂಗ್ಲೆಂಡ್ ತಂಡವು 160 ರನ್ಗಳ ಅಂತರದಿಂದ ನೆದರ್ಲೆಂಡ್ಸ್ಗೆ ಸೋಲುಣಿಸಿತು. ಇದರೊಂದಿಗೆ ಅಂಕಪಟ್ಟಿಯಲ್ಲಿ ಏಳನೇ ಸ್ಥಾನಕ್ಕೇರಿತು.
ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವು ಈಗಾಗಲೇ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಹಾದಿಯಿಂದ ಹೊರಬಿದ್ದಿದೆ. ಆದರೆ ಮುಂಬರುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಆಡುವ
ನೇರ ಅರ್ಹತೆಗಾಗಿ ಅಗ್ರ ಏಳರಲ್ಲಿ ಸ್ಥಾನ ಪಡೆಯುವುದೊಂದೇ ಈಗ ಇಂಗ್ಲೆಂಡ್ ಮುಂದಿರುವ ಗುರಿ. ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಜೋಸ್ ಬಟ್ಲರ್ ಬಳಗವು ಪಾಕಿಸ್ತಾನವನ್ನು ಎದುರಿಸಲಿದೆ. ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಸ್ಟೋಕ್ಸ್ ಶತಕ, ಡೇವಿಡ್ ಮಲಾನ್ ಮತ್ತು ಕ್ರಿಸ್ ವೋಕ್ಸ್ ಅವರ ಅರ್ಧಶತಕಗಳ ಬಲದಿಂದ ತಂಡವು 50 ಓವರ್ಗಳಲ್ಲಿ 9 ವಿಕೆಟ್ಗಳಿಗೆ 339 ರನ್ ಗಳಿಸಿತು. ಬೆನ್ ಸ್ಟೋಕ್ಸ್ 108 ರನ್,(84ಎಸೆತ, 4X6, 6X6), ಡೇವಿಡ್ ಮಲನ್ 87, ಕ್ರಿಸ್ ವೋಕ್ಸ್ 51 ರನ್ ಗಳಿಸಿದರು.
ಗುರಿ ಬೆನ್ನಟ್ಟಿದ ಡಚ್ ಬಳಗಕ್ಕೆ 37.2 ಓವರ್ಗಳಲ್ಲಿ 179 ರನ್ ಗಳಿಸಲಷ್ಟೇ ಸಾಧ್ಯವಾಯಿತು.
ಸ್ಪಿನ್ನರ್ ಮೋಯಿನ್ ಅಲಿ ಮತ್ತು ಆದಿಲ್ ರಶೀದ್ ಅವರು ತಲಾ ಮೂರು ವಿಕೆಟ್ ಗಳಿಸಿದರು.












