ಎಣ್ಮೂರು:ಕನ್ನಡ ಭಾಷೆಗೆ ಅನೇಕ ಸವಾಲುಗಳಿವೆ. ಅದನ್ನು ನಾವೆಲ್ಲರೂ ಎದುರಿಸಿ ಕನ್ನಡ ಭಾಷೆ, ಸಾಹಿತ್ಯ ಪರಂಪರೆಯನ್ನು ಉಳಿಸಿ ಅದನ್ನು ಮುಂದಿನ ಜನಾಂಗಕ್ಕೆ ತಲಪಿಸುವುದು ನಮ್ಮೆಲರ ಜವಬ್ದಾರಿಯಾಗಿದೆ. ಸಾಹಿತ್ಯ ಪರಿಷತ್ತಿನಂತಹ ಅನೇಕ ಸಂಸ್ಥೆಗಳು ಈ ಜವಬ್ದಾರಿಯನ್ನು ಹೊರಬೇಕು ಎಂದು ಪತ್ರಕರ್ತ ದುರ್ಗಾಕುಮಾರ್ ನಾಯರ್ಕೆರೆ ಹೇಳಿದರು. ಅವರು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗು ಕನ್ನಡ ಸಂಘ ಸರಕಾರಿ ಪ್ರೌಢ ಶಾಲೆ ಎಣ್ಮೂರು ಇದರ ಸಹಯೊಗದಲ್ಲಿ
ನಡೆದ ಸುವರ್ಣ ಸಂಬ್ರಮ -೫೦ ರ ಪ್ರಯುಕ್ತ ನಡೆದ ಉಪನ್ಯಾಸ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮವವನ್ನು ಶಾಲಾಭಿವೃದ್ಧಿ ಸಮಿತಿ ಅದ್ಯಕ್ಷ ಮೇದಪ್ಪ ಗೌಡ ದೀಪ ಬೆಳಗಿಸಿ ಉದ್ಗಾಟಿಸಿ ಶುಭ ಹಾರೈಸಿದರು. ಶಾಲೆಗೆ ಜ್ನಾನ ಪೀಠ ಪ್ರಶಸ್ತಿ ಪುರಸ್ಕ್ರತರ ಭಾವಚಿತ್ರಗಳನ್ನು ಹೋಬಳಿ ಘಟಕ ಅಧ್ಯಕ್ಷ ಬಾಬು ಗೌಡ ಅಚ್ರಪ್ಪಾಡಿ ವಿತರಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ತಾಲುಕು ಘಟಕದ ಅಧ್ಯಕ್ಷ ಚಂದ್ರಶೇಖರ ಪೇರಾಲು ವಹಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಶಾಲೆಯ ಹಿರಿಯ ಶಿಕ್ಷಕಿ ಕವಿತಾ ಡಿ ಎಮ್,ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ, ಪ್ರಭಾಕರ ಕಿರಿಭಾಗ ಉಪಸ್ಥಿತರಿದ್ದರು. ಕಾರ್ಯಕ್ರಮದ ಪ್ರಯುಕ್ತ ಏರ್ಪಡಿಸಿದ ವಿವಿದ ಸ್ಪರ್ಧಾ ವಿಜೇತರಿಗೆ ಬಹುಮಾನಗಳನ್ನು ಅಥಿತಿಗಳು ವಿತರಿಸಿದರು. ಎಣ್ಮೂರು ಪ್ರೌಢ ಶಾಲೆಯ ವಿದ್ಯಾರ್ಥಿಗಳು ಕನ್ನಡ ಗೀತ ಗಾಯನ ನಡೆಸಿ ಸುಶ್ರಾವ್ಯವಾಗಿ ಹಾಡಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರತಿನಿಧಿ ರಾಮಚಂದ್ರ ಪಳ್ಳತ್ತಡ್ಕ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹ ಶಿಕ್ಷಕ ಲಿಂಗಪ್ಪ ಬೆಳ್ಳಾರೆ ವಂದಿಸಿದರು. ಕನ್ನಡ ಸಂಘದ ಸಂಚಾಲಕಿ ಉಷಾ ಕೆ ಯೆಸ್ ಕಾರ್ಯಕ್ರಮ ನಿರೂಪಿಸಿದರು.