ಮಂಗಳೂರು:ಅತಿಯಾದ ಪ್ಲಾಸ್ಟಿಕ್ ಬಳಸುವುದರಿಂದ ಉಂಟಾಗುತ್ತಿರು ತ್ಯಾಜ್ಯ ನಮ್ಮ ಸುತ್ತಮುತ್ತಲಿನ ಪರಿಸರದೊಂದಿಗೆ ಸೇರಿ ಸಮಸ್ತ ಜೀವ ಸಂಕುಲಕ್ಕೆ ಹಾನಿ ಯುಂಟು ಮಾಡುತ್ತಿದೆ ಈ ಬಗ್ಗೆ ಜನ ಜಾಗೃತಿ ಮೂಡಿಸಬೇಕಾಗಿದೆ ಎಂದು ಗ್ರೀನ್ ಹೀರೋ ಓಫ್ ಇಂಡಿಯಾ ಡಾ. ಆರ್.ಕೆ. ನಾಯರ್ ತಿಳಿಸಿದ್ದಾರೆ.ಬಲ್ಮಠ ಸರಕಾರಿ ಪದವಿ ಪೂರ್ವ ಮಹಿಳಾ ಕಾಲೇಜುನಲ್ಲಿ ಅರಣ್ಯ ಇಲಾಖೆ, ಮಂಗಳೂರು, ಪರಿಸರ ಅಧ್ಯಯನ ಕೇಂದ್ರ ಹಾಗೂ
ಬಲ್ಮಠ ಸರಕಾರಿ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆ ಸಹಾಯಕ ವಲಯ ಅರಣ್ಯಧಿಕಾರಿ ಮೋಹನ್, ಉದ್ಯಮಿ ರಮೇಶ್ ನಾಯಕ್, ಲೆಕ್ಕ ಪರಿಶೋಧಕ ಎಸ್. ಎಸ್. ನಾಯಕ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ನಿಯೋಜಿತ ಅಧ್ಯಕ್ಷ ಭಾಸ್ಕರ್ ರೈ, ಬಲ್ಮಠ ಸರಕಾರಿ ಪದವಿ ಪೂರ್ವ ಕಾಲೇಜುನ ವನಿತಾ ದೇವಾಡಿಗ, ರೆಡ್ ಕ್ರಾಸ್ ಸೊಸೈಟಿ ಸದಸ್ಯ ಪುಷ್ಪರಾಜ್ ಬಿ ಎನ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.