ಸುಳ್ಯ:ಸುಳ್ಯ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಯಾಗಿ ಎನ್.ಭವಾನಿಶಂಕರ್ ಅವರಿಗೆ ವರ್ಗಾವಣೆಯಾಗಿದೆ. ಎಂಟು ವರ್ಷಗಳಿಂದ ಸುಳ್ಯ ತಾಲೂಕು ಪಂಚಾಯತ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಭವಾನಿಶಂಕರ್ ಅವರು 4 ವರ್ಷಗಳ ಕಾಲ
ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾಗಿ ಮತ್ತು 4 ವರ್ಷಗಳಿಂದ ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸುಳ್ಯಕ್ಕೆ ಬಂಟ್ವಾಳ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ರಾಜಣ್ಣ ಅವರನ್ನು ಸುಳ್ಯ ತಾ.ಪಂ.ಕಾರ್ಯನಿರ್ವಹಣಾಧಿಕಾರಿಯಾಗಿ ಆದೇಶವಾಗಿದೆ ಎಂದು ತಿಳಿದು ಬಂದಿದೆ.