ಸುಳ್ಯ: ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ ರಾಜಣ್ಣ ಮತ್ತೆ ಅಧಿಕಾರ ಸ್ವೀಕರಿಸಿದ್ದಾರೆ. ಚುನಾವಣೆಯ ಹಿನ್ನಲೆಯಲ್ಲಿ ರಾಜಣ್ಣ ಅವರಿಗೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆಯಾಗಿತ್ತು. ಶಿಕಾರಿಪುರ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಪರಮೇಶ್ ಅವರು ಸುಳ್ಯ ತಾ.ಪಂ.ಕಾರ್ಯನಿರ್ವಾಕ ಅಧಿಕಾರಿಯಾಗಿದ್ದರು. ಇದೀಗ ಚುನಾವಣಾ ನೀತಿ ಸಂಹಿತೆ ಮುಗಿದ ಹಿನ್ನಲೆಯಲ್ಲಿ ರಾಜಣ್ಣ ಅವರು ಸುಳ್ಯ ತಾ.ಪಂ.ನಲ್ಲಿ ಅಧಿಕಾರ ವಹಿಸಿಕೊಂಡಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.







