ಸುಳ್ಯ:ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೆವೆ ಸಲ್ಲಿಸಿ ವರ್ಗಾವಣೆಯಾದ ಎನ್.ಭವಾನಿಶಂಕರ ಅವರಿಗೆ ಬೀಳ್ಕೊಡುಗೆ ಹಾಗೂ ನೂತನ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ ಅವರಿಗೆ ಸ್ವಾಗತ ಕಾರ್ಯಕ್ರಮ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಎನ್.ಭವಾನಿಶಂಕರ ‘ ಸುಳ್ಯ ತನಗೆ ಎರಡನೇ ಮನೆ
ಇದ್ದಂತೆ. ಸುಳ್ಯದಲ್ಲಿ ಕಾರ್ಯನಿರ್ವಹಿಸಿದ ಸಂದರ್ಭ ವೃತ್ತಿ ಜೀವನದಲ್ಲಿ ಅತ್ಯಂತ ಖುಷಿ ಕೊಟ್ಟಿದೆ. ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಅವರು ಹೇಳಿದರು.
ನೂತನ ಇಒ ರಾಜಣ್ಣ ಮಾತನಾಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ಪಂಚಾಯತ್ ಸಿಬ್ಬಂದಿಗಳ ಸಂಘದ ಅಧ್ಯಕ್ಷೆ
ಚಂದ್ರಾವತಿ, ಗ್ರಾಮ ಪಂಚಾಯತ್ ಸಿಬ್ಬಂದಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷೆ ನೇತ್ರಾವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್, ಪಶುವೈದ್ಯಕೀಯ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ನಿತಿನ್ ಪ್ರಭು,
ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಇ, ವಲಯ ಅರಣ್ಯಾಧಿಕಾರಿಗಳಾದ ಎನ್.ಮಂಜುನಾಥ್, ಗಿರೀಶ್ ಆರ್, ಉಪ ತಹಶೀಲ್ದಾರ್ ಚಂದ್ರಕಾಂತ್ ಎಂ.ಆರ್, ಸಿಡಿಪಿಒ ಶೈಲಜಾ ದಿನೇಶ್ ಕುಕ್ಕುಜಡ್ಕ,ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ಯಯಾಧಿಕಾರಿ ಶೀತಲ್ ಯು.ಬಿ,
ಮರ್ಕಂಜ ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ವೀಣಾ ಎಂ.ಟಿ, ಜಿ.ಪಂ. ಇಂಜಿನಿಯರ್ಗಳಾದ ಜನಾರ್ಧನ್, ಮಣಿಕಂಠ, ಕಸಾಪ ಅಧ್ಯಕ್ಷ ಚಂದ್ರಶೇಖರ ಪೇರಾಲು, ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕಿ ಸರೋಜಿನಿ, ತಾಲೂಕು ಪಂಚಾಯತ್ ವ್ಯವಸ್ಥಾಪಕರಾದ ಹರೀಶ್ ರಾವ್, ಸರಕಾರಿ ಪದವಿಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ, ಲಯನ್ಸ್ ಕ್ಲಬ್ ಅಧ್ಯಕ್ಷ ವೀರಪ್ಪ ಗೌಡ ಕಣ್ಕಲ್, ತಾಲೂಕು ಪಂಚಾಯತ್ ಅಧಿಕಾರಿಗಳು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.