ಸುಳ್ಯ: ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ ಅವರಿಗೆ ವರ್ಗಾವಣೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ ರಾಜಣ್ಣ ಅವರಿಗೆ ವರ್ಗಾವಣೆಯಾಗಿದೆ. ಲೋಕಸಭಾ ಚುನಾವಣೆ ನಡೆಯುವ
ಹಿನ್ನಲೆಯಲ್ಲಿ ವರ್ಗಾವಣೆ ಮಾಡಲಾಗಿದೆ. ಶಿಕಾರಿಪುರ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಪರಮೇಶ್ವರಪ್ಪ ಅವರು ಸುಳ್ಯ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿಯಾಗಿ ಬರಲಿದ್ದಾರೆ ಎಂದು ತಿಳಿದು ಬಂದಿದೆ. ಚುನಾವಣಾ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ವರ್ಗಾವಣೆ ಮಾಡಲಾಗಿದೆ.ಲೋಕಸಭಾ ಚುನಾವಣೆ ಮುಗಿದ ಬಳಿಕ ರಾಜಣ್ಣ ಅವರು ಮತ್ತೆ ಸುಳ್ಯ ತಾ.ಪಂ.ಕಾರ್ಯನಿರ್ವಹಣಾಧಿಕಾರಿಯಾಗಿ ಬರಲಿದ್ದಾರೆ.












