ಮಂಗಳೂರು: ಈದ್ ಮಿಲಾದ್ ಪ್ರಯುಕ್ತ ನಾಳೆ(ಆ.25) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವಜನಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. ಈ ಭಾಗದಲ್ಲಿ ನಾಳೆ ಈದ್ ಮಿಲಾದ್ ಆಚರಿಸುವ ಕಾರಣ ಆ.26ರ ಸಾರ್ವಜನಿಕ ರಜೆಯ ಬದಲಿಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿಗಳ ಕಚೇರಿಯ
ಕೊರಿಕೆಯಂತೆ ಸರಕಾರದ ಅಧೀನ ಕಾರ್ಯದರ್ಶಿ ಆ.25ರಂದು ಸಾರ್ವತ್ರಿಕ ರಜೆ ಘೋಷಿಸಲು ಜಿಲ್ಲಾಧಿಕಾರಿ ಹಂತದಲ್ಲಿಯೇ ನಿಯಮಾನುಸಾರ ತೀರ್ಮಾನ ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದ್ದು, ಅದರಂತೆ ಜಿಲ್ಲಾಧಿಕಾರಿಗಳು ಸಾರ್ವತ್ರಿಕ ರಜೆ ಘೋಷಣೆ ಮಾಡಿದ್ದಾರೆ.









