ಸಕಲೇಶಪುರ: ಸಕಲೇಶಪುರದ ಎತ್ತಿನಹೊಳೆ ಎಂಬಲ್ಲಿಂದ ಚಿಕ್ಕಬಳ್ಳಾಪುರಕ್ಕೆ ಕುಡಿಯುವ ನೀರು ಹರಿಸುವ ಎತ್ತಿನಹೊಳೆ ಯೋಜನೆಯ ಮೊದಲ ಹಂತದ ವಾಣಿವಿಲಾಸ ಸಾಗರಕ್ಕೆ ನೀರನ್ನು ಹರಿಸುವ ಕಾಮಗಾರಿಯ ಉದ್ಘಾಟನೆ ಸೆ. 6 ಮುಖ್ಯಮಂತ್ರಿ ಸಿದ್ದರಾಮಯ್ಯ ನೆರೆವೇರಿಸಲಿದ್ದಾರೆ. ಬೃಹತ್ ನೀರಾವರಿ ಇಲಾಖೆ ಸಚಿವರಾದ
ಉಪ ಮುಖ್ಯಮಂತ್ರಿ ಹಾಗು ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಮತ್ತು ಇತರ ಸಚಿವರ ಸಹಿತ ಗಣ್ಯ ವ್ಯಕ್ತಿಗಳು ಭಾಗವಹಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಎತ್ತಿನಹೊಳೆಗೆ ಕಾಂಗ್ರೆಸ್ ನಿಯೋಗ ಭೇಟಿ ನೀಡಿತು. ಅರಸೀಕೆರೆ ಶಾಸಕ ಹಾಗು ಗೃಹ ಮಂಡಳಿಯ ಅಧ್ಯಕ್ಷರಾದ ಶಿವಲಿಂಗೇಗೌಡ, ಹಾಸನ ಸಂಸತ್ ಸದಸ್ಯ ಶ್ರೇಯಸ್ ಎಂ ಪಟೇಲ್, ಮಾಜಿ ಸಚಿವ ಶಿವರಾಮ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್, ಹಾಸನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಲಕ್ಷ್ಮಣ್, ಮುರಳಿ ಮೋಹನ್, ಬನವಾಸೆ ರಂಗಸ್ವಾಮಿ, ಶ್ರೀಧರ ಗೌಡ, ಮಹೇಶ್ ಮತ್ತು ಇತರ ಮುಖಂಡರುಗಳ ನಿಯೋಗ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ.ಶಹೀದ್ ತೆಕ್ಕಿಲ್ ತಿಳಿಸಿದ್ದಾರೆ.