ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೊದಲ ಹಂತಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಚಾಲನೆ ನೀಡಿದರು.ಕೋಲಾರ, ಚಿಕಗಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ
29 ತಾಲ್ಲೂಕುಗಳಿಗೆ ಕುಡಿಯುವ ನೀರು ಒದಗಿಸುವ ಈ ಮಹತ್ವಾಕಾಂಕ್ಷೆ ಯೋಜನೆಗೆ ಮುಖ್ಯಮಂತ್ರಿ ಚಾಲನೆ ನೀಡಿದರು.
ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಚಿವರಾದ ರಾಜಣ್ಣ, ಎಂ.ಬಿ.ಪಾಟೀಲ್, ಜಿ.ಪರಮೇಶ್ವರ್, ಕೆ.ಜೆ.ಜಾರ್ಜ್ ಸೇರಿ ಶಾಸಕರು, ಚುನಾಯಿತ ಪ್ರತಿನಿಧಿಗಳು ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು