ಸುಳ್ಯ:ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಎತ್ನಿಕ್ ಡೇ ಆಚರಿಸಲಾಯಿತು. ವಿದ್ಯಾರ್ಥಿಗಳು ವಿವಿಧ ಸಂಪ್ರದಾಯಿಕ ಉಡುಗೆ ತೊಡುಗೆಗಳನ್ನು ತೊಟ್ಟು ವಿಶಿಷ್ಟ ರೀತಿಯಲ್ಲಿ ದಿನವನ್ನು ಆಚರಿಸಲಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ ವಿ.ಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಪಪ್ರಾಂಶುಪಾಲ
ಡಾ. ಶ್ರೀಧರ್ ಕೆ., ಡೀನ್ ಅಕಾಡೆಮಿಕ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ. ಉಮಾಶಂಕರ್ ಕೆ.ಎಸ್., ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕೇರಳ ಶೈಲಿಯ ಚೆಂಡೆ ವಾದ್ಯಗಳು, ದೇಶದ ವಿಭಿನ್ನ ಸಂಸ್ಕೃತಿಗಳನ್ನು ಬಿಂಬಿಸುವ ಹಲವು ಉಡುಗೆ ತೊಡುಗೆಗಳು ಎತ್ನಿಕ್ಡೇಯ ಮೆರುಗನ್ನು ಹೆಚ್ಚಿಸಿತ್ತು. ಕಾರ್ಯಕ್ರಮದಲ್ಲಿ ವಿವಿಧ ರೀತಿಯ ನೃತ್ಯ ಪ್ರದರ್ಶನಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು. ಕಾಲೇಜಿನ ಎಲ್ಲಾ ಬೋಧಕ ಹಾಗೂ ಬೋಧಕೇತರ ಸಿಬಂಧಿಗಳು ಕಾರ್ಯಕ್ರಮವನ್ನು ವೀಕ್ಷಿಸಿ ಸಂಭ್ರಮಿಸಿದರು. ವಿದ್ಯಾರ್ಥಿಗಳಾದ ಖುಷಿ ಮತ್ತು ಕಿರಣ್ ಕಾರ್ಯಕ್ರಮವನ್ನು ನಿರೂಪಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದ ಸಂಯೋಜಕರಾದ ಸಿವಿಲ್ ವಿಭಾಗದ ಪ್ರೊ. ಕೃಷ್ಣರಾಜ್ ಎಂ.ವಿ. ಕಾರ್ಯಕ್ರಮವನ್ನು ಸಂಯೋಜಿಸಿದರು.