ಸುಳ್ಯ:ರೋಟರಿ ಕ್ಲಬ್ ಸುಳ್ಯ ಸಿಟಿ, ಆನಂದಾಶ್ರಮ ಸೇವಾ ಟ್ರಸ್ಟ್ ಪುತ್ತೂರು, ಗ್ರಾಮ ಪಂಚಾಯತ್ ಉಬರಡ್ಕ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಉಬರಡ್ಕ, ತಾಲೂಕು ಸಾರ್ವಜನಿಕ ಆಸ್ಪತ್ರೆ ಸುಳ್ಯ, ದ. ಕ ಜಿಲ್ಲಾ ಅಂಧತ್ವ ನಿವಾರಣ ಸಂಸ್ಥೆ ಮಂಗಳೂರು, ಆರೋಗ್ಯ ಮತ್ತು ಕ್ಷೇಮ ಕೇಂದ್ರ ಉಬರಡ್ಕ ಗ್ರಾಮ ಹಾಗೂ ಉಬರಡ್ಕದ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ
ಉಚಿತ ಕಣ್ಣಿನ ಪರೀಕ್ಷೆ ಹಾಗೂ ಕನ್ನಡಕ ವಿತರಣೆ ಕಾರ್ಯಕ್ರಮ ಉಬರಡ್ಕದ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಆನಂದಾಶ್ರಮ ಸೇವಾ ಟ್ರಸ್ಟ್ ಮುಖ್ಯಸ್ಥೆ ಡಾ.ಗೌರಿ ಪೈ ಉದ್ಘಾಟಿಸಿದರು,
ರೋಟರಿ ಕ್ಲಬ್ ಸುಳ್ಯ ಸಿಟಿಯ ಅಧ್ಯಕ್ಷ ಗಿರೀಶ್ ನಾರ್ಕೋಡು ಅಧ್ಯಕ್ಷತೆ ವಹಿಸಿದ್ದರು, ದ. ಕ ಜಿಲ್ಲಾ ಅಂಧತ್ವ ನಿವಾರಣ ಸಂಸ್ಥೆಯ ನೇತ್ರಾಧಿಕಾರಿ ಶಾಂತರಾಜ್ ಕಣ್ಣಿನ ಪರೀಕ್ಷೆಯ ಮಹತ್ವದ ಬಗ್ಗೆ ಮಾಹಿತಿ ನೀಡಿದರು, ಉಬರಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷೆ ಪೂರ್ಣಿಮ ಸೂಂತೋಡು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಉಬರಡ್ಕ ಇದರ ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ಹಾಗೂ ಉಬರಡ್ಕ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಚಿತ್ರಕುಮಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು,
ಅಕ್ಷತ ಪ್ರಾರ್ಥಿಸಿದರು. ಹರೀಶ್ ಉಬರಡ್ಕ ಸ್ವಾಗತಿಸಿ,ನವೀನ್ ಅಳಿಕೆ ವಂದಿಸಿದರು, ಶಿವಪ್ರಸಾದ ಕೆ. ವಿ ಕಾರ್ಯಕ್ರಮ ನಿರೂಪಿಸಿದರು.
ಸುಮಾರು 155 ಮಂದಿ ಕಣ್ಣಿನ ಪರೀಕ್ಷೆಗೆ ಒಳಪಟ್ಟು 124 ಮಂದಿಗೆ ಉಚಿತವಾಗಿ ಕನ್ನಡಕ ವಿತರಿಸಲಾಯಿತು ಹಾಗೂ 9 ಮಂದಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಸೂಚಿಸಲಾಯಿತ್ತು. ಆರೋಗ್ಯ ಮತ್ತು ಕ್ಷೇಮ ಕೇಂದ್ರ ಉಬರಡ್ಕ ಗ್ರಾಮದ ವತಿಯಿಂದ ರಕ್ತದೊತ್ತಡ ಪರೀಕ್ಷೆ ಹಮ್ಮಿಕೊಳ್ಳಲಾಗಿತ್ತು. ಯುವಜನ ಸಂಯುಕ್ತ ಮಂಡಳಿಯ ಉಪಾಧ್ಯಕ್ಷ ವಿಜಯ ಕುಮಾರ ಉಬರಡ್ಕ, ಪಂಚಾತ್ ಅಭಿವೃದ್ಧಿ ಅಧಿಕಾರಿ ರವಿಚಂದ್ರ,ಹೇಮಂತ ಕಾಮತ್, ರಾಗೇಶ್, ವಿಜಯ ಕುಮಾರ ನಾರ್ಕೋಡು, ರಾಧಾಕೃಷ್ಣ ನಾರ್ಕೋಡು, ವಿದ್ಯಾಧರ ಹರ್ಲಡ್ಕ ಹಾಗೂ ಪಂಚಾಯತ್ ಸದಸ್ಯರು ಹಾಗೂ ಸಿಬ್ಬಂದಿ ವರ್ಗ ಮತ್ತು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.









