ಸುಳ್ಯ: ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಸೊಳ್ಳೆಗಳ ನಿರ್ಮೂಲನೆಗಾಗಿ ಫಾಗಿಂಗ್ ಮಾಡಲು ನ.ಪಂ.ಸದಸ್ಯ ಶರೀಫ್ ಕಂಠಿ ನಗರ ಪಂಚಾಯತ್ಗೆ ಮನವಿ ಮಾಡಿದ್ದಾರೆ. ವಿಪರೀತವಾಗಿ ಸೊಳ್ಳೆಗಳ
ಕಾಟದಿಂದ ಜನಸಾಮಾನ್ಯರು ಬಳಲುತ್ತಿದ್ದು ಮುಂದಿನ ದಿನಗಳಲ್ಲಿ ಮಾರಕ ರೋಗಗಳು ಬರುವ ಸಾಧ್ಯತೆಯಿದ್ದು, ಕೂಡಲೇ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಫಾಗಿಂಗ್ ಮಾಡಬೇಕು ಎಂದು ನಗರ ಪಂಚಾಯತ್ ಮುಖ್ಯಾಧಿಕಾರಿಗೆ ಮನವಿ ಮಾಡಿದ್ದಾರೆ.
ಸುಳ್ಯ ನಗರ ವ್ಯಾಪ್ತಿಯಲ್ಲಿ ವಿಪರೀತ ಸೆಕೆ ಏರಿದ್ದು ಸೊಳ್ಳೆಗಳ ಕಾಟವೂ ಹೆಚ್ಚಾಗಿದೆ. ಅಲ್ಲದೆ ಪದೇ ಪದೇ ವಿದ್ಯುತ್ ಕಡಿತ ಉಂಟಾಗಿತ್ತಿರುವುದರಿಂದ ಸಮಸ್ಯೆ ಉಂಟಾಗಿದೆ ಎಂದು ಶರೀಫ್ ಕಂಠಿ ತಿಳಿಸಿದ್ದಾರೆ.