ಬೆಂಗಳೂರು: ‘ಬೇಸಿಗೆಯಲ್ಲಿ ಬೆಳೆಗಳಿಗೆ ನೀರು ಹರಿಸಲು ವಿದ್ಯುತ್ ಸಮಸ್ಯೆಯಾಗದಂತೆ ರಾಜ್ಯ ಸರ್ಕಾರ ಎಲ್ಲ ಅಗತ್ಯ ಕ್ರಮ ಕೈಗೊಳ್ಳುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿಯಾದ ರೈತರ ನಿಯೋಗದೊಂದಿಗೆ
ರೈತರ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಿದ ಬಳಿಕ ಮಾತನಾಡಿದ ಅವರು, ವಿದ್ಯುತ್ ಕೊರತೆ ಉಂಟಾದಲ್ಲಿ ಹೊರ ರಾಜ್ಯಗಳಿಂದ ಪೂರೈಕೆ ಮಾಡುವ ಕುರಿತು ಚಿಂತನೆ ಮಾಡಲಾಗುವುದು. ಅಲ್ಲದೆ ರೈತರ ಪಂಪ್ಸೆಟ್ಗೆ ನಿರಂತರ ಏಳು ತಾಸು 3 ಫೇಸ್ ವಿದ್ಯುತ್ ಪೂರೈಸುವ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡುವದು ಎಂದು ತಿಳಿಸಿದರು.
ಸಭೆಯಲ್ಲಿ ರೈತ ಮುಖಂಡ ಬಡಗಲಪುರ ನಾಗೇಂದ್ರ, ಸಚಿವರಾದ ಗೋಪಾಲಯ್ಯ, ವಿ.ಸೋಮಣ್ಣ, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಕೃಷಿ ಇಲಾಖೆ ಕಾರ್ಯದರ್ಶಿ ಶಿವಯೋಗಿ ಕಳಸದ ಹಾಜರಿದ್ದರು.