ನವದೆಹಲಿ:ಜನಪ್ರಿಯ ಜಾಲತಾಣಗಳಾದ ಫೇಸ್ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ ಆಗಿದ್ದು, ಜಗತಿನಾದ್ಯಂತ ಏಕಾಏಕಿ ಖಾತೆಗಳು ಲಾಗೌಟ್ ಆಗಿವೆ. ಮಾರ್ಚ್ 5ರಂದು ರಾತ್ರಿ 9ರ ಸುಮಾರಿಗೆ ಫೇಸ್ಬುಕ್ ಹಾಗೂ ಇನ್ಸ್ಟಾಗ್ರಾಮ್ ಏಕಾಏಕಿ ತನ್ನಷ್ಟಕ್ಕೆ ತಾನೇ ಲಾಗೌಟ್ ಆಗಿವೆ. ಇದರಿಂದ ಬಳಕೆದಾರರು ಕಂಗಲಾಗಿದ್ದಾರೆ. ಇನ್ನು ಫೇಸ್ಬುಕ್ ಪಾಸ್ವರ್ಡ್ ಮರೆತವರು ಪುನಃ ಲಾಗಿನ್ ಆಗುವುದಕ್ಕೆ ಪರದಾಡುವಂತಾಗಿದೆ. ಮೊಬೈಲ್ ಹಾಗೂ
ಕಂಪ್ಯೂಟರ್ನಲ್ಲಿ ಎರಡೂ ಖಾತೆಗಳು ಲಾಗ್ಔಟ್ ಆಗಿದ್ದು, ಮತ್ತೆ ಲಾಗ್ಇನ್ ಆಗುತ್ತಿಲ್ಲ.ಏಕಾಏಕಿ ಖಾತೆಗಳು ಲಾಗೌಟ್ ಆಗಿರುವುದು ಏಕೆ? ಎನ್ನುವುದು ಬಳಕೆದಾರರ ಪ್ರಶ್ನೆಯಾಗಿದೆ. ತನ್ನಷ್ಟಕ್ಕೆ ತಾನೇ ಲಗೌಟ್ ಆಗಿದ್ದರಿಂದ ಪಾಸ್ವರ್ಡ್ ಮರೆತವರು ಮತ್ತೆ ಲಾಗಿನ್ ಆಗುವುದು ಹೇಗೆ ಎನ್ನುವ ಚಿಂತೆ ಕಾಡತೊಡಗಿದೆ. ಇದರಿಂದಾಗಿ ಸಾವಿರಾರು ಜನ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಫೇಸ್ಬುಕ್ ಹಾಗೂ ಇನ್ಸ್ಟಾಗ್ರಾಂ ಸರ್ವರ್ ಡೌನ್ ಆಗಿರುವ ಕುರಿತು ಬಗೆಬಗೆಯ ಟ್ರೋಲ್ಗಳು, ವಿಡಿಯೊಗಳನ್ನು ಟ್ವಿಟ್ಟರ್ ಎಕ್ಸ್ನಲ್ಲಿ ಹರಿದಾಡುತ್ತಿವೆ. ಇನ್ನು ಯಾಕೆ ಈ ಸಮಸ್ಯೆ ಉಂಟಾಗಿದೆ ಎಂಬುದರ ಕುರಿತು ಫೇಸ್ಬುಕ್ ಅಥವಾ ಇನ್ಸ್ಟಾಗ್ರಾಂ ಇದುವರೆಗೆ ಯಾವುದೇ ಸ್ಪಷ್ಟನೆ ನೀಡಿಲ್ಲ. ಫೇಸ್ ಬುಕ್, ಇನ್ಸ್ಟಾಗ್ರಾಂ ಪ್ರಸಿದ್ಧ ಸಾಮಾಜಿಕ ಜಾಲತಾಣವಾಗಿದ್ದು, ಈ ವೇದಿಕೆಯಲ್ಲಿ ವಿಶ್ವದಾದ್ಯಂತ ಬಿಲಿಯನ್ ಗಟ್ಟಲೇ ಬಳಕೆದಾರರಿದ್ದಾರೆ.