ಅಹಮದಾಬಾದ್: ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಕ್ರಿಕೆಟ್ ಪಂದ್ಯದಲ್ಲಿ ಭಾರತ ವಿರುದ್ಧ ಟಾಸ್ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡುತ್ತಿರುವ ಭಾರತಕ್ಕೆ 3 ವಿಕೆಟ್ ನಷ್ಟವಾಗದೆ. 15 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 97 ರನ್ ಗಳಿಸಿದೆ. 31 ಎಸೆತಗಳಲ್ಲಿ 4 ಬೌಂಡರಿ ಮತ್ತು 3 ಸಿಕ್ಸರ್ ನೆರವಿನಿಂದ
47ರನ್ ಗಳಿಸಿದ ನಾಯಕ ರೋಹಿತ್ ಶರ್ಮ ಔಟಾದರು. ತಲಾ 4 ರನ್ ಗಳಿಸಿದ ಶುಭ್ಮನ್ ಗಿಲ್ ಹಾಗೂ ಶ್ರೇಯಸ್ ಅಯ್ಯರ್ ಬೇಗನೇ ಔಟಾಗಿ ನಿರಾಸೆ ಮೂಡಿಸೊದರು. 32 ರನ್ ಗಳಿಸಿದ ವಿರಾಟ್ ಕೊಹ್ಲಿ ಹಾಗೂ 8 ರನ್ ಗಳಿಸಿದ ಕೆ.ಎಲ್.ರಾಹುಲ್ ಕ್ರೀಸಿನಲ್ಲಿದ್ದಾರೆ.ಭಾರತ 3ನೇ ಬಾರಿಗೆ ಕಪ್ ಗೆಲ್ಲುವ ತವಕದಲ್ಲಿದೆ.ಐದು ಬಾರಿ ಪ್ರಶಸ್ತಿ ಗೆದ್ದಿರುವ ಆಸ್ಟ್ರೇಲಿಯಾ ತಂಡವು ಆರನೇ ವಿಶ್ವಕಪ್ ವಿಜಯದ ಮೇಲೆ ಕಣ್ಣಿಟ್ಟಿದೆ. ಉಭಯ ತಂಡಗಳು ಸೆಮಿಫೈನಲ್ ಆಡಿದ ತಂಡವನ್ನೇ
ಉಳಿಸಿಕೊಂಡಿದ್ದು, ಯಾವುದೇ ಬದಲಾವಣೆ ಮಾಡಿಲ್ಲ.
ತಂಡಗಳು:
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜ, ಕುಲದೀಪ್ ಯಾದವ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.
ಅಸ್ಟ್ರೇಲಿಯಾ: ಪ್ಯಾಟ್ ಕಮಿನ್ಸ್ (ನಾಯಕ), ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಟ್ರಾವಿಸ್ ಹೆಡ್, ಸ್ಟೀವ್ ಸ್ಮಿತ್, ಮಾರ್ನಸ್ ಲಾಬುಷೇನ್, ಗ್ಲೆನ್ ಮ್ಯಾಕ್ಸ್ವೆಲ್, ಜೋಶ್ ಇಂಗ್ಲಿಷ್, ಜೋಶ್ ಹ್ಯಾಜಲ್ವುಡ್, ಮಿಚೆಲ್ ಸ್ಟಾರ್ಕ್, ಆ್ಯಡಂ ಜಂಪಾ








