ದುಬೈ: ಕುವೈತ್ನ ವಸತಿ ಕಟ್ಟಡವೊಂದರಲ್ಲಿ ಇಂದು ಸಂಭವಿಸಿದ ಅಗ್ನಿ ಅವಘಡದಲ್ಲಿ ಭಾರತೀಯರು ಸೇರಿದಂತೆ 40ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.ಕುವೈತ್ನ ದಕ್ಷಿಣ
ಅಹ್ಮದಿ ಗವರ್ನರೇಟ್ನಲ್ಲಿರುವ ಮಂಗಾಫ್ ಪ್ರದೇಶದ ಆರು ಅಂತಸ್ತಿನ ಕಟ್ಟಡದ ಅಡುಗೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಕುವೈತ್ನಲ್ಲಿ ಬೆಂಕಿ ಅವಘಡ ಸಂಭವಿಸಿರುವುದಕ್ಕೆ ತೀವ್ರ ಆಘಾತವಾಗಿದೆ. 40ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. 50ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಯಭಾರ ಕಚೇರಿ ಸಿಬ್ಬಂದಿ ನೆರವಿಗೆ ಧಾವಿಸಿದ್ದಾರೆ’ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.