ಸುಳ್ಯ: ಸುಳ್ಯ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ಸುಳ್ಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.ಸುಳ್ಯ ಬಸ್ ನಿಲ್ದಾಣದಿಂದ ಸುಳ್ಯ – ಕೊಯನಾಡು ಮಾರ್ಗವಾಗಿ ಹೊರಡಬೇಕಿದ್ದ ಬಸ್ ನಲ್ಲಿ ಏಕಾಏಕಿ ಹೊಗೆ, ಬೆಂಕಿ ಕಾಣಿಸಿಕೊಂಡಿತು.
ಬಸ್ ನಲ್ಲಿದ್ದ
ಪ್ರಯಾಣಿಕರನ್ನು ತಕ್ಷಣ ಕೆಳಗೆ ಇಳಿಸಲಾಯಿತು. ಬಳಿಕ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದರು. ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಕಾರಣ ಕೆಲ ಕಾಲ ಆತಂಕ ಸೃಷ್ಠಿಯಾಯಿತು. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಹೇಳಲಾಗಿದೆ.
