ಮಂಗಳೂರು: ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಸದ್ಯದಲ್ಲೇ ಘೋಷಣೆಯಾಗುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ ಅನಧಿಕೃತ ಜಾಹೀರಾತು ಮತ್ತು ಫಲಕಗಳನ್ನು ತೆರವುಗೊಳಿಸಲು ಮುಖ್ಯ ಚುನಾವಣಾಧಿಕಾರಿಯವರು ನಿರ್ದೇಶನ ನೀಡಿರುತ್ತಾರೆ. ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಅನುಮತಿಯನ್ನು ಪಡೆಯದ
ಹಾಕಲಾಗಿರುವ ಬ್ಯಾನರ್-ಬಂಟಿಂಗ್ಸ್ ಗಳು ಮತ್ತು ಪಕ್ಕಗಳು, ಗೋಡೆ ಬರಹಗಳು ಮತ್ತು ಇತರ ಜಾಹೀರಾತುಗಳನ್ನು ತೆರವುಗೊಳಿಸಲು ಸೂಚಿಸಲಾಗಿದೆ. ಜಿಲ್ಲೆಯಲ್ಲಿ ನಗರ ಪ್ರದೇಶಗಳಲ್ಲಿ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಅನಧಿಕೃತವಾಗಿ ಅನುಮತಿ ಪಡೆಯದೇ ಬ್ಯಾನರ್-ಬಂಟಿಂಗ್ಸ್ಗಳು ಮತ್ತು ಫಲಕಗಳು, ಗೋಡಬರಹಗಳು ಮತ್ತು ಇತರ ಜಾಹಿರಾತುಗಳು ಜಿಲ್ಲೆಯಲ್ಲಿ ಎಲ್ಲಾ ಭಾಗಗಳಲ್ಲಿ ಕಂಡುಬಂದಿರುತ್ತದೆ.
ಸ್ಥಳೀಯ ಸಂಸ್ಥೆಗಳ ಮಹಾನಗರ ಪಾಲಿಕೆ, ನಗರ ಸಭೆ, ಪಟ್ಟಣ ಪಂಚಾಯತ್ ಮತ್ತು ಗ್ರಾಮ ಪಂಚಾಯತ್ ಗಳ ಮುಖ್ಯಸ್ಥರು ಈ ಬಗ್ಗೆ ಗಮನ ಹರಿಸಿ ಎಲ್ಲಾ ಅನಧಿಕೃತ ಬ್ಯಾನರ್, ಬಂಟಿಂಗ್ಸ್ಗಳು ಮತ್ತು ಪಕ್ಷಗಳು, ಬರಹಗಳು ಮತ್ತು ಇತರ ಜಾಹಿರಾತುಗಳನ್ನು ಅತೀ ಜರೂರಾಗಿ ತೆರವುಗೊಳಿಸಲು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.