ನವದೆಹಲಿ: ಭಾರೀ ಮಳೆಯ ಅಬ್ಬರಕ್ಕೆ ಉತ್ತರ ಭಾರತ ನಲುಗಿದ್ದು, ಹಲವು ರಾಜ್ಯಗಳಲ್ಲಿ ಪ್ರವಾಹ, ಭೂಕುಸಿತಕ್ಕೆ ಭಾರೀ ಅನಾಹುತ ಸೃಷ್ಟಿಯಾಗಿದೆ. ಹಿಮಾಚಲ ಪ್ರದೇಶ, ಪಂಜಾಬ್, ದೆಹಲಿ, ಹರಿಯಾಣ ಸೇರಿದಂತೆ ಹಲವು ರಾಜ್ಯಗಳು ಮಳೆಗೆ ತತ್ತರಿಸಿದೆ. ಹಿಮಾಚಲ ಪ್ರದೇಶದ
ಬಹುತೇಕ ಜಿಲ್ಲೆಯಲ್ಲಿ ಭೂಕುಸಿತ, ಪ್ರವಾಹದಿಂದ ನಲುಗಿದೆ. ಹಿಮಾಚಲ ಪ್ರದೇಶ, ದೆಹಲಿ, ಹರ್ಯಾಣ, ಪಂಜಾಬ್ ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ, ಪ್ರವಾಹ ಉಂಟಾಗಿದೆ.
ದೆಹಲಿಯ ಬಹುತೇಕ ಪ್ರದೇಶಗಳು ಜಲಾವೃತಗೊಂಡಿದೆ. ಹಲವು ಕಟ್ಟಡಗಳ ಗೋಡಗಳು ಕುಸಿದಿದೆ. ಸತತ ಮಳೆ ಹಾಗೂ ಪ್ರವಾಹಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ. ವಿವಿಧ ರಾಜ್ಯಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಭಾರಿ ಮಳೆಯಿಂದ ನದಿಗಳು ಅಪಾಯದ ಮಟ್ಟ ಮೀರಿದೆ. ನದಿ ಪಾತ್ರದಲ್ಲಿನ ಕಟ್ಟಡಗಳು ಕುಸಿದಿದೆ. ಹೊಲಗಳು ಮುಳುಗಡೆಯಾಗಿದೆ. ಇದೀಗ ಪಂಜಾಬ್ ಹಾಗೂ ಹರ್ಯಾಣ ಸೇರಿ ವಿವಿಧ ರಾಜ್ಯಗಳಲ್ಲಿ ಪರಿಸ್ಥಿತಿಯೂ ಆತಂಕಕ್ಕೆ ಕಾರಣಚಾಗಿದೆ.
ಹಿಮಾಚಲ ಪ್ರದೇಶ ಭೂಕುಸಿತ, ಪ್ರವಾಹದಲ್ಲಿ ಹಲವು ಕಟ್ಟಡಗಳು ನೆಲಕ್ಕುರುಳಿದೆ.