ಸುಳ್ಯ:ಪ್ರಾಥಮಿಕ ವಿಭಾಗ ತಾಲೂಕು ಮಟ್ಟದ ಪುಟ್ಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದ ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಕರ್ನಾಟಕ ಪಬ್ಲಿಕ್ ಸ್ಕೂಲ್ ಗಾಂಧಿನಗರದಲ್ಲಿ ನಡೆದ ಪ್ರಾಥಮಿಕ ವಿಭಾಗ ತಾಲೂಕು ಮಟ್ಟದ ಪುಟ್ಬಾಲ್ ಪಂದ್ಯಾಟದಲ್ಲಿ ಕೆಪಿಎಸ್ ಗಾಂಧಿನಗರ ಅಜ್ಜಾವರ ಪ್ರಾಥಮಿಕ ಶಾಲೆಯನ್ನು ಮಣಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಯಿತು. ಉದ್ಘಾಟನಾ ಸಮಾರಂಭದ
ಸಭಾಧ್ಯಕ್ಷತೆಯನ್ನು ಕೆಪಿಎಸ್ ನ ಕಾರ್ಯಾಧ್ಯಕ್ಷ ಚಿದಾನಂದ ಕುದ್ಪಾಜೆ ವಹಿಸಿದ್ದರು. ಕಾರ್ಯಕ್ರಮವವನ್ನು ಶಿಕ್ಷಣ ಸಂಯೋಜಿಕಿ ನಳಿನಿ ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ
ಕೆಪಿಎಸ್ನ ಪ್ರಾಂಶುಪಾಲ ಅಬ್ದುಲ್ ಸಮದ್, ಸಮೂಹ ಸಂಪನ್ಮೂಲ ವ್ಯಕ್ತಿ ಮಮತಾ, ಉಪ ಪ್ರಾಂಶುಪಾಲರಾದ ಜ್ಯೋತಿ ಲಕ್ಷ್ಮಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಧನಂಜಯ ಮೆರ್ಕಜೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಜೆ.ಕೆ.ರೈ, ಮೈದುನ್ ಮಾಸ್ಟರ್ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕರಾದ ಪದ್ಮನಾಭ ಅತ್ಯಾಡಿ, ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ ಇ. ಆಗಮಿಸಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಶಸ್ತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಫುಟ್ಬಾಲ್ ಪಂದ್ಯಾಟಕ್ಕೆ ಶುಭ ಹಾರೈಸಿದರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಚಿದಾನಂದ ಕುದ್ಪಾಪಾಜೆ. ನಗರ ಪಂಚಾಯತ್ ಸದಸ್ಯರಾದ ಶರೀಫ್ ಕಂಠಿ, ಹಾಗೂ ದೈಹಿಕ ಶಿಕ್ಷಣ ಪರಿವೀಕ್ಷಕರಾದ ಸೂಫಿ ಪೆರಾಜೆ, ಕೆಪಿಎಸ್ ಸದಸ್ಯರಾದ ಅಬ್ದುಲ್ ಅಜೀಜ್, ಜೈ ಭಾರತ್ ನಾ ಅಬ್ದುಲ್ ಮಜೀದ್ ವಿಜೇತ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಿದರು