ಕಲ್ಲುಗುಂಡಿ:ದ. ಕ. ಜಿ. ಪ ಹಿರಿಯ ಪ್ರಾಥಮಿಕ ಶಾಲೆ ಕಲ್ಲುಗುಂಡಿ ಆರ್. ಎಂ. ಎಸ್. ಎ ಪ್ರೌಢಶಾಲೆ ಕಲ್ಲುಗುಂಡಿ ಇದರ ಆಶ್ರಯದಲ್ಲಿ ಶಾಲಾ ಮಕ್ಕಳಿಗೆ ಉಚಿತ ಪಾದರಕ್ಷೆ ವಿತರಣೆ ಮಾಡಲಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಪಂಚಾಯತ್ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಕಾರ್ಯಕ್ರಮ ಉದ್ಘಾಟಿಸಿ ಪಾದರಕ್ಷೆ ವಿತರಣೆ ಮಾಡಿದರು. ಸರಕಾರಿ
ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬಿಸಿಯೂಟ, ಸಮವಸ್ತ್ರ, ಚಪ್ಪಲಿ, ಮೊಟ್ಟೆ, ಚಿಕ್ಕಿ, ಹಲವು ಯೋಜನೆ ಸರಕಾರ ಜಾರಿಗೆ ತಂದು ಸರಕಾರಿ ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುತಿದೆ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ನೀಡುವ ಮೂಲಕ ಪೋಷಕರು, ಅಧ್ಯಾಪಕರು ಹಾಗೂ ಶಾಲೆಗೆ ಕೀರ್ತಿ ತರುವ ಕೆಲಸ ಮಾಡಬೇಕುಎಂದರು. ಶಾಲಾ ಎಸ್. ಡಿ. ಎಂ. ಸಿ ಅಧ್ಯಕ್ಷ ಮಹಮ್ಮದ್ ಹನೀಫ್ ಅಧ್ಯಕ್ಷತೆ ವಹಿಸಿದ್ದರು ಪ್ರೌಢಶಾಲೆ ಮುಖ್ಯ ಶಿಕ್ಷಕಿ ಜಯಶ್ರೀ, ಎನ್. ಕೆ. ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಚಂದ್ರಾವತಿ ಎಸ್. ಡಿ. ಎಂ. ಸಿ ಉಪಾಧ್ಯಕ್ಷರಾದ ಗಾಯತ್ರಿ ಎಸ್. ಡಿ. ಎಂ. ಸಿ ಸರ್ವ ಸದಸ್ಯರು. ಪ್ರಾಥಮಿಕ ಹಾಗೂ ಪ್ರೌಢಶಾಲೆ ಶಿಕ್ಷಕರು. ವಿದ್ಯಾರ್ಥಿಗಳು ಉಪಸ್ಥಿತರಿದ್ದರು.