ಸುಳ್ಯ: ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಸುಳ್ಯ ವಲಯದ ಉಪವಲಯ ಅರಣ್ಯಾಧಿಕಾರಿ ಯಶೋಧರ.ಪಿ ಮತ್ತು ಅಧಿಸೂಚಿತ ಅರಣ್ಯ ವೀಕ್ಷಕ ಶಿವರಾಮ ಬಿ. ಅವರಿಗೆ ಅರಣ್ಯ ಇಲಾಖೆಯ ವತಿಯಿಂದ ಬೀಳ್ಕೊಡುಗೆ ಸಮಾರಂಭ ಅರಂಬೂರಿನ ಶ್ಯಾಮೆಲ್ ಹೆರಿಟೇಜ್ನಲ್ಲಿ ನಡೆಯಿತು. ನಿವೃತ್ತರಾದವರನ್ನು
ಸನ್ಮಾನಿಸಿ ಬೀಳ್ಕೊಡಲಾಯಿತು.ಸುಬ್ರಹ್ಮಣ್ಯ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಶಾಂತ್ ಕುಮಾರ್ ಪೈ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ಉಪವಿಭಾಗದ ಸಹಾಯಕ ಅರಣ್ಯಾಧಿಕಾರಿ ಸುಬ್ಬಯ್ಯ, ಕೆವಿಜಿ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ.ಲೀಲಾಧರ. ಡಿ.ವಿ, ಸುಳ್ಯ ವಲಯ

ಅರಣ್ಯಾಧಿಕಾರಿ ಎನ್.ಮಂಜುನಾಥ್,ಪಂಜ ವಲಯ ಅರಣ್ಯಾಧಿಕಾರಿ ಸಂಧ್ಯಾ, ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ಚೇತನ್, ಸಾಮಾಜಿಕ ವಲಯ ಅರಣ್ಯಾಧಿಕಾರಿ ಸಾಗರ್ ಪಣಗುತ್ತಿ ಮುಖ್ಯ ಅತಿಥಿಯಾಗಿ ಶುಭ ಹಾರೈಸಿದರು. ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್ ಸ್ವಾಗತಿಸಿ ವಂದಿಸಿದರು. ಉಪವಲಯ ಅರಣ್ಯಾಧಿಕಾರಿ ಸೌಮ್ಯ ಕಾರ್ಯಕ್ರಮ ನಿರೂಪಿಸಿದರು.









