ಸುಳ್ಯ:ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ 2023-24ನೇ ಸಾಲಿನ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ‘ಆರಂಭ್’ ಜ. 19ರಂದು ಅಮರಶ್ರೀಭಾಗ್ನ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆಯಿತು. ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಸಮಿತಿ ಸದಸ್ಯ ಸಂತೋಷ್ ಜಾಕೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ವಿ.ಟಿ.ಯು. ಕಾರ್ಯಕಾರಿ ಸಮಿತಿ ಸದಸ್ಯ ಡಾ. ಉಜ್ವಲ್ ಯು.ಜೆ ಮುಖ್ಯ ಅತಿಥಿಯಾಗಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ್ ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಉಪಪ್ರಾಂಶುಪಾಲರೂ, ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರೂ ಆಗಿರುವ ಡಾ. ಶ್ರೀಧರ್ ಕೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರುಕೆಮಿಸ್ಟ್ರಿ ವಿಭಾಗ ಮುಖ್ಯಸ್ಥರಾದ ಡಾ. ಸುರೇಖಾ ಎಂ. ವಂದಿಸಿದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು.
ವಿದ್ಯಾರ್ಥಿಗಳಾದ ಸಪ್ತಮಿ, ಶೃತಿ, ಮೊಹಮ್ಮದ್ ಅಜ್ಮಲ್ ಮತ್ತು ಕಿರಣ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಕ್ಷೇಮಾಧಿಕಾರಿಗಳಾದ ಡಾ. ಪ್ರಜ್ಞಾ ಎಂ.ಆರ್ ಮತ್ತು ಪ್ರೊ. ಲೋಕೇಶ್ ಪಿ.ಸಿ ಸಹಕಾರ ನೀಡಿದರು. ವಿದ್ಯಾರ್ಥಿ ನಾಯಕರಾದ ಪ್ರಜ್ಞಾ ಜೆ.ಯು, ಯಶವಂತ ಬಿ.ಪಿ, ಆದಿತ್ಯ ಕೆ, ಪ್ರಸಾದ್ ಎಂ, ಅಭಿಷೇಕ್ ಆರ್.ಆರ್ ಮತ್ತು ಶಾಶ್ವತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಆಡಳಿತಾಧಿಕಾರಿ ನಾಗೇಶ್ ಕೊಚ್ಚಿ ಸೇರಿದಂತೆ ಕಾಲೇಜಿನ ಉಪನ್ಯಾಸಕ ವೃಂದ, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.














