ಸುಳ್ಯ: ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರು ಇಂದು ದಿನ ಪೂರ್ತಿ ಬಿರುಸಿನ ಚುನಾವಣಾ ಪ್ರಚಾರ ಕೈಗೊಂಡರು.
ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಎಡಮಂಗಲ ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ದೇವಸ್ಥಾನಕ್ಕೆ ಭೇಟಿ ನೀಡಿ
ಪ್ರಾರ್ಥನೆ ಸಲ್ಲಿಸಿದರು.ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಎಡಮಂಗಲ ಗ್ರಾಮ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಡೆಮೈಲ ಕಾಲೋನಿಗೆ ಭೇಟಿ ನೀಡಿ ಮತ ಯಾಚನೆ ಮಾಡಿ ಜನರ ಸಮಸ್ಯೆಗಳನ್ನು ಆಲಿಸಿದರು.ಕೇಪು – ಕುಟ್ರುಪ್ಪಾಡಿಗೆ ಭೇಟಿ ನೀಡಿದರು. ಪೊಸೊಳಿಗೆ ಗ್ರಾಮ ಕಾಂಗ್ರೆಸ್ ಸಭೆಯಲ್ಲಿ ಭಾಗವಹಿಸಿದರು.
ರೆಂಜಿಲ್ಯಾಡಿಗೆ ಭೇಟಿ ನೀಡಿ ಸ್ಥಳೀಯರೊಂದಿಗೆ ಮಾತುಕತೆ ನಡೆಸಿದರು. ಐತ್ತೂರು ಕಾಲೋನಿಗೆ ಭೇಟಿ ನೀಡಿ ಚುನಾವಣಾ ಪ್ರಚಾರ ನಡೆಸಿದರು.