ಸುಳ್ಯ: ಸುಳ್ಯ ತಾಲೂಕಿನಲ್ಲಿ ಅಡಿಕೆ ಹಳದಿ ರೋಗ ಹಾಗೂ ಎಲೆ ಚುಕ್ಕಿ ರೋಗದಿಂದ ಅಡಿಕೆ ಕೃಷಿ ವ್ಯಾಪಕವಾಗಿ ನಾಶವಾಗಿದೆ. ದಿನೇ ದಿನೇ ಅಡಿಕೆ ಕೃಷಿ ನಶಿಸುತ್ತಿದೆ. ಈ ವಿಚಾರವನ್ನು ಸರಕಾರದ ಗಮನಕ್ಕೆ ತರಲಾಗಿದ್ದು ಪರಿಹಾರ ನೀಡಬೇಕೆಂದು ಮನವಿ ಸಲ್ಲಿಸಲಾಗಿದೆ ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ತಿಳಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಗಮನಕ್ಕೆ ತರಲಾಗಿದ್ದು ಸೂಕ್ತ ಪರಿಹಾರ ಒದಗಿಸಿಕೊಡಬೇಕೆಂದು ಮನವಿ ಸಲ್ಲಿಸಲಾಗಿದೆ ಎಂದು ಜಿ.ಕೃಷ್ಣಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post