ನವದೆಹಲಿ: ಸೆ.9 ಮತ್ತು 10ರಂದು ಎರಡು ದಿನಗಳ ಕಾಲ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಜಿ-20 ಶೃಂಗ ಸಭೆ ನಡೆಯಲಿದೆ. ಇದೇ ಮೊದಲ ಬಾರಿಗೆ ಜಾಗತಿಕ ಮಟ್ಟದ ಮಹತ್ವದ ಸಮ್ಮೇಳನ ಭಾರತದಲ್ಲಿ ನಡೆಯುತ್ತಿದ್ದು, 20 ದೇಶಗಳ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ.ನಾಳೆಯಿಂದ ಎರಡು ದಿನ ನಡೆಯಲಿರುವ
ಶೃಂಗಸಭೆಯಲ್ಲಿ ಅಮೇರಿಕದ ಅಧ್ಯಕ್ಷ ಜೋ ಬೈಡನ್, ಬ್ರಿಟನ್ ಪ್ರಧಾನಿ ರಿಷಿ ಸುನಕ್ ಸೇರಿ 20 ದೇಶಗಳ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.ಹವಾಮಾನ ಬದಲಾವಣೆ ಹಾಗೂ ಬಡತನದಂತಹ ವಿಶ್ವದ ಕೆಲವು ಪ್ರಮುಖ ಸಮಸ್ಯೆಗಳ ಕುರಿತು ಚರ್ಚೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ವಿವಿಧ ರಾಷ್ಟ್ರಗಳ ನಾಯಕರ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಆದರೆ, ಚೀನಾ ಮತ್ತು ರಷ್ಯಾದ ಅಧ್ಯಕ್ಷರುಗಳು ಸಭೆಯಲ್ಲಿ ಭಾಗವಹಿಸುತ್ತಿಲ್ಲ. ಜಿ-20 ಸಭೆಗೆ ದೆಹಲಿಯಲ್ಲಿ ಎಲ್ಲಾ ಸಿದ್ಧತೆ ನಡೆದಿದ್ದು ಬಿಗಿ ಭದ್ರತೆ ಏರ್ಪಡಿಸಲಾಗಿದೆ.
ಸಂಚಾರದ ಮೇಲೆ ಭಾರೀ ನಿರ್ಬಂಧಗಳನ್ನು ಹೇರಲಾಗಿದೆ. ಶಾಲೆಗಳು, ಬ್ಯಾಂಕ್ಗಳು ಮತ್ತು ಎಲ್ಲ ಸರ್ಕಾರಿ ಕಚೇರಿಗಳನ್ನು ಮುಚ್ಚಲಾಗುವುದು. 1 ಲಕ್ಷಕ್ಕೂ ಪೊಲೀಸ್ ಮತ್ತು ಭದ್ರತಾ ಸಿಬ್ಬಂದಿಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ.









