ಸುಳ್ಯ: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಅವರು ಫೆ.21ರಂದು ಸುಳ್ಯಕ್ಕೆ ಭೇಟಿ ನೀಡಿದ ಸಂದರ್ಭ ಸುಳ್ಯ ಪ್ರೆಸ್ ಕ್ಲಬ್ಗೆ ಭೇಟಿ ನೀಡಿದರು.ಅಲ್ಲಿ ಅವರನ್ನು ಶಾಲು ಹೊದಿಸಿ ಗೌರವಿಸಲಾಯಿತು. ಪ್ರೆಸ್ ಕ್ಲಬ್ನ ವತಿಯಿಂದ ನಿರ್ಮಿಸುವ ಗ್ರಂಥಾಲಯಕ್ಕೆ ಪ್ರಾಧಿಕಾರದಿಂದ
5 ಲಕ್ಷ ರೂ.ಅನುದಾನ ನೀಡುವುದಾಗಿ ಸೋಮಣ್ಣ ಬೇವಿನಮರದ ಘೋಷಿಸಿದರು.ಪ್ರಾಧಿಕಾರದ ಸದಸ್ಯ ಎ.ಆರ್.ಸುಬ್ಬಯ್ಯಕಟ್ಟೆ, ಗಡಿನಾಡ ಸಾಹಿತ್ಯ,ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷ ಚನಿಯಪ್ಪ ನಾಯ್ಕ್, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಟಿ.ಎಂ.ಶಹೀದ್ ತೆಕ್ಕಿಲ್, ಬ್ಲಾಕ್ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು,ನ.ಪಂ.ಸದಸ್ಯರಾದ ಸಿದ್ದಿಕ್ ಕೊಕ್ಕೊ, ರಾಜು ಪಂಡಿತ್, ಚೇತನ್ ಕಜೆಗದ್ದೆ ಮೊದಲಾದವರು ಉಪಸ್ಥಿತರಿದ್ದರು.ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್, ನಿರ್ದೇಶಕ ಗಂಗಾಧರ ಕಲ್ಲಪಳ್ಳಿ, ಸದಸ್ಯರಾದ ತೇಜೇಶ್ವರ ಕುಂದಲ್ಪಾಡಿ, ದಯಾನಂದ ಕಲ್ನಾರ್ ಮತ್ತಿತರರು ಸೇರಿ ಪ್ರಾಧಿಕಾರದ ಅಧ್ಯಕ್ಷರನ್ನು ಸ್ವಾಗತಿಸಲಾಯಿತು.