ಮಂಗಳೂರು: ಜಿಲ್ಲೆಯ ಪ್ರವಾಸ ಕೈಗೊಂಡಿರುವ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ. ಸೋಮಶೇಖರ್ ಅವರು ಫೆ 21ರ ಮಂಗಳವಾರ ಮಂಗಳೂರಿನ ತುಳು ಭವನ ಹಾಗೂ ಕೊಂಕಣಿ ಭವನದ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು. ನಿಗದಿತ
ಕಾಲಮಿತಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸಂಬಂಧಿಸಿದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಳಿಗೆ ಅವರು ಸೂಚನೆ ನೀಡಿದರು.ತುಳು ಅಕಾಡೆಮಿ ರಿಜಿಸ್ಟ್ರಾರ್ ಕವಿತಾ, ಕೊಂಕಣಿ ಹಾಗೂ ಬ್ಯಾರಿ ಅಕಾಡೆಮಿ ರಿಜಿಸ್ಟ್ರಾರ್ ಮನೋಹರ್ ಕಾಮತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್.ಜಿ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಚಂದ್ರಶೇಖರಯ್ಯ, ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅರುಣ್ ಹಾಗೂ ಇತರರಿದ್ದರು.