ಸುಳ್ಯ:ಗಾನಸಿರಿ ಕಲಾಕೇಂದ್ರ ಪುತ್ತೂರು ಇದರ ಸುಳ್ಯ ಶಾಖೆಯ ವಾರ್ಷಿಕ ಹಬ್ಬ ‘ನಾದ ನಿನಾದ-2024’ ಇಂದು ಸಂಜೆ 4ರಿಂದ ಸುಳ್ಯದ ಯುವಜನ ಸಂಯುಕ್ತ ಮಂಡಳಿಯ ಕಲಾ ವೇದಿಕೆಯಲ್ಲಿ ನಡೆಯಲಿದೆ. ಖ್ಯಾತ ಗಾಯಕರು ಹಾಗೂ ಗಾನಸಿರಿ ಕಲಾ ಕೇಂದ್ರದ ಮುಖ್ಯಸ್ಥರೂ ಆದ ಡಾ.ಕಿರಣ್ ಕುಮಾರ್ ಗಾನಸಿರಿ ಅವರ ಸಾರಥ್ಯದಲ್ಲಿ ಗಾನಸಿರಿ ಸುಳ್ಯ ಶಾಖೆಯ ವಿದ್ಯಾರ್ಥಿಗಳಿಗೆ ಟಿವಿ ರಿಯಾಲಿಟಿ ಶೋ ಮಾದರಿಯಲ್ಲಿ ಅದ್ದೂರಿ ಗಾಯನ ಸ್ಪರ್ಧೆ ನಡೆಯಲಿದೆ. ಪ್ರವೇಶ ಉಚಿತವಾಗಿದ್ದು ಸಂಗೀತದ ರಸದೌತಣ ಸವಿಯಬಹುದು ಎಂದು ಡಾ.ಕಿರಣ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post












