ಸುಳ್ಯ:ಅಂಜಲಿ ಮೊಂಟೆಸ್ಸರಿ ಸ್ಕೂಲ್ನಲ್ಲಿ ಪೋಷಕರ ಸಮ್ಮುಖದಲ್ಲಿ ಗಾಂಧೀ ಜಯಂತಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಿಸಲಾಯಿತು. ಎಲ್ಲಾ ಪೋಷಕರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗಾಂಧೀಜಿಯವರ ಚರಿತ್ರೆ ಮತ್ತು ತತ್ವಗಳಾದ ಸತ್ಯ ಮತ್ತು
ಅಹಿಂಸೆ ಬಗ್ಗೆ ಕಥೆಯ ಮುಖಾಂತರ ಸಂಸ್ಥೆಯ ಸಂಚಾಲಕಿ ಗೀತಾಂಜಲಿ ತಿಳಿಸಿಕೊಟ್ಟರು. ಮಕ್ಕಳು ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ವೇಷ ಭೂಷಣ ಧರಿಸಿ ಚರಿತ್ರೆಯ ಬಗ್ಗೆ ತಿಳಿದುಕೊಂಡರು.ಎಲ್ಲಾ ಪೋಷಕರು, ಶಿಕ್ಷಕರು ಮತ್ತು ಮಕ್ಕಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ರಘುಪತಿ ರಾಘವ ರಾಜಾರಾಮ್ ಭಜನೆ ಹಾಡುವ ಮೂಲಕ ಕಾರ್ಯಕ್ರಮ ಸಂಪನ್ನಗೊಂಡಿತು.