ಸುಬ್ರಹ್ಮಣ್ಯ: ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಡುವಲ್ಲಿ ಮುಂಚೂಣಿಯಲ್ಲಿದ್ದ ಮಹಾತ್ಮಾ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್ಬಹುದ್ದೂರ ಶಾಸ್ತ್ರಿ ಈ ಎರಡು ಮಹಾತ್ಮರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದೇ ನಾವು ಅವರಿಗೆ ಸಲ್ಲಿಸುವ ದೊಡ್ಡ ಗೌರವ ಎಂದು ಎಸ್ಎಸ್ಪಿಯು ಕಾಲೇಜಿನ ಪ್ರಾಂಶುಪಾಲ ಸೋಮಶೇಖರ ನಾಯಕ್ ಹೇಳಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ
ಆಡಳಿತಕ್ಕೊಳಪಟ್ಟ ಎಸ್ಎಸ್ಪಿಯು ಕಾಲೇಜಿನಲ್ಲಿ ನಡೆದ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನ ಆಚರಣೆಯಲ್ಲಿ ಅವರು ಮಾತನಾಡಿದರು. ಮಹಾತ್ಮ ಗಾಂಧಿಜಿ ಮತ್ತು ಮಾಜಿ ಪ್ರಧಾನಿ ಲಾಲ್ಬಹುದ್ದೂರ ಶಾಸ್ತಿç ಅವರ ಭಾವಚಿತ್ರಕ್ಕೆ ಸರ್ವರೂ ಪುಷ್ಪಾರ್ಚನೆ ಮಾಡಿದರು. ಈ ಸಂದರ್ಭದಲ್ಲಿ ಪ್ರೌಢಶಾಲಾ ವಿಭಾಗದ ಹಿರಿಯ ಸಹಶಿಕ್ಷಕ ಎಂ.ಕೃಷ್ಣ ಭಟ್, ಕಾಲೇಜಿನ ಸಾಂಸ್ಕೃತಿಕ ಸಂಘದ ಸಂಚಾಲಕಿ ರೇಖಾರಾಣಿ ಸೋಮಶೇಖರ್, ವಿದ್ಯಾರ್ಥಿ ಸಂಘದ ಸಂಚಾಲಕ ಜಯಪ್ರಕಾಶ್ ಆರ್, ಉಪನ್ಯಾಸಕರಾದ ರತ್ನಾಕರ ಸುಬ್ರಹ್ಮಣ್ಯ, ಜಯಶ್ರೀ.ವಿ.ದಂಬೆಕೋಡಿ, ಗಿರೀಶ್ ಸೇರಿದಂತೆ ಉಪನ್ಯಾಸಕರು ಮತ್ತು ಶಿಕ್ಷಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ಶಿಕ್ಷಕ ಮತ್ತು ಕಲಾವಿದ ರಘು ಬಿಜೂರು ರಘುಪತಿ ರಾಘವ ಗೀತೆಯನ್ನು ಹಾಡಿದರು.