ಸುಳ್ಯ:ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿ ಮತ್ತು ಭಾರತದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆಯನ್ನು ಸುಳ್ಯ ತಾಲೂಕು ಕಚೇರಿ ಸಭಾಂಗಣ ದಲ್ಲಿ ಜರಗಿತು.
ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ದೀಪ ಪ್ರಜ್ವಲನೆ ಮಾಡಿ, ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ ಗಾಂಧೀಜಿಯವರ
ವಿಚಾರಧಾರೆಯನ್ನು ಇಡೀ ವಿಶ್ವವೇ ಅಂಗೀಕರಿಸಿದೆ. ಗಾಂಧೀಜಿಯವರು ಮತ್ತು ಅವರ ಆದರ್ಶಗಳು ಎಲ್ಲಾ ಕಾಲಕ್ಕೂ ಪ್ರಸ್ತುತ ಎಂದು ಹೇಳಿದರು.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಿದ್ದರು
ಮುಖ್ಯ ಅತಿಥಿಗಳಾಗಿ ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ. ಎಂ. ಮುಸ್ತಫ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ ಭಾಗವಹಿಸಿದ್ದರು.ತಹಶೀಲ್ದಾರ್ ಹಾಗು ರಾಷ್ಟ್ರೀಯ ಹಬ್ಬಗಳ ಸಮಿತಿಯ ಅಧ್ಯಕ್ಷೆ ಮಂಜುಳಾ ಎಂ, ಕ್ಷೇತ್ರ ಶಿಕ್ಷಣಾಧಿಕಾರಿ ವೈ. ಎಸ್.ಹರಗಿ
ಉಪಸ್ಥಿತರಿದ್ದರು .ಉಪ ತಹಶೀಲ್ದಾರ್ ಚಂದ್ರಕಾಂತ್ ಸ್ವಾಗತಿಸಿ, ಸಿಡಿಪಿಒ ಶೈಲಜಾ ವಂದಿಸಿದರು.









