ಸುಳ್ಯ:ಸುಳ್ಯದ ಗಾಂಧಿ ಚಿಂತನ ವೇದಿಕೆ ವತಿಯಿಂದ ಅಕ್ಟೋಬರ್ 2 ರಂದು ಗಾಂಧಿ ನಡಿಗೆ ಹಾಗೂ ಗಾಂಧಿ ಚಿಂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವೇದಿಕೆಯ ವತಿಯಿಂದ ನೀಡಲಾಗುವ ರಾಜ್ಯ ಮಟ್ಟದ ಗಾಂಧಿ ಸ್ಮೃತಿ ಪ್ರಶಸ್ತಿಯನ್ನು ಈ ಬಾರಿ ಹಿರಿಯ ಪತ್ರಕರ್ತ ಡಾ.ಯು.ಪಿ.ಶಿವಾನಂದ ಅವರಿಗೆ ನೀಡಲು ನಿರ್ಧರಿಸಲಾಗಿದೆ ಎಂದು
ಗಾಂಧಿ ಚಿಂತನ ವೇದಿಕೆ ಪ್ರಧಾನ ಸಂಚಾಲಕ ಹರೀಶ್ ಬಂಟ್ವಾಳ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಕ್ಟೋಬರ್ 2 ರಂದು ಅಪರಾಹ್ನ ಮಹಾತ್ಮ ಗಾಂಧೀ ಪ್ರತಿಮೆಯ ಬಳಿಯಿಂದ ರಂಗಮಯೂರಿಯ ವರೆಗೆ ಗಾಂಧೀ ನಡಿಗೆ ನಡೆಯಲಿದೆ.ಬಳಿಕ ರಂಗ ಮಯೂರಿಯಲ್ಲಿ ನಡೆಯುವ ಗಾಂಧೀ ಜಯಂತಿ ಕಾರ್ಯಕ್ರಮ ನಡೆಯಲಿದೆ. ಹಿರಿಯ ಸಹಕಾರಿ ಕೆ.ಸೀತಾರಾಮ ರೈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ವೇದಿಕೆಯ ಸ್ಥಾಪಕ ಸಂಚಾಲಕ ಡಾ.ಸುಂದರ ಕೇನಾಜೆ ಗಾಂಧಿ ಚಿಂತನ ನಡೆಸಿಕೊಡಲಿದ್ದಾರೆ. ಶಾಸಕಿ ಭಾಗೀರಥಿ ಮುರುಳ್ಯ, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಮಾಜಿ ವಿಧಾನ ಪರಿಷತ್ ಸದಸ್ಯ ಅಣ್ಣಾ ವಿನಯಚಂದ್ರ, ಸೂಡ ಅಧ್ಯಕ್ಷ ಕೆ.ಎಂ.ಮುಸ್ತಾಫ
ಮತ್ತಿತರರು ಉಪಸ್ಥಿತರಿದ್ದರು.
ಸುದ್ದಿಗೋಷ್ಠಿಯಲ್ಲಿ ವೇದಿಕೆಯ ಸಂಚಾಲಕರಾದ ದಿನೇಶ್ ಮಡಪ್ಪಾಡಿ, ಚಂದ್ರಶೇಖರ ಪೇರಾಲು,ದುರ್ಗಾಕುಮಾರ್ ನಾಯರ್ಕೆರೆ,ಶಂಕರ ಪೆರಾಜೆ, ಚಂದ್ರಾವತಿ ಬಡ್ಡಡ್ಕ ಉಪಸ್ಥಿತರಿದ್ದರು.








