ಸುಳ್ಯ:ರಾಷ್ಟ್ರಪಿತ ಮಹಾತ್ಮ ಗಾಂಧೀಜಿ 1934ರಲ್ಲಿ ಸುಳ್ಯಕ್ಕೆ ಆಗಮಿಸಿದ್ದರು. ಗಾಂಧೀಜಿಯವರು ಸುಳ್ಯಕ್ಕೆ ಆಗಮಿಸಿದ 90 ವರ್ಷ ಆಗಿರುವ ಹಿನ್ನಲೆಯಲ್ಲಿ ಆ ದಿನದ ನೆನಪಿಗಾಗಿ ಸುಳ್ಯದ ಗಾಂಧಿ ಚಿಂತನ ವೇದಿಕೆ ವತಿಯಿಂದ ಗಾಂಧಿ ನಡಿಗೆ ಕಾರ್ಯಕ್ರಮ ಫೆ.24 ರಂದು ಸುಳ್ಯದಲ್ಲಿ ನಡೆಯಿತು. ಸುಳ್ಯದ ಜ್ಯೋತಿ ವೃತ್ತದಿಂದ ಆರಂಭಗೊಂಡು ನಗರದ

ಗಾಂಧಿನಗರದವರೆಗೆ ಗಾಂಧಿ ನಡಿಗೆ ನಡೆಯಿತು. ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ ಎಂ.ಎಚ್ ನಡಿಗೆಗೆ ಚಾಲನೆ ನೀಡಿದರು. ಪ್ರಮುಖರು,ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದಾರೆ.
ಮಾಜಿ ಸಚಿವ ಎಸ್.ಅಂಗಾರ, ಪದ್ಮಶ್ರೀ ಪುರಸ್ಕೃತರಾದ ಡಾ.ಗಿರೀಶ್ ಭಾರದ್ವಾಜ್, ಮಾಜಿ ವಿಧಾನ ಪರಿಷತ್ ಸದಸ್ಯ ಅಣ್ಣಾ ವಿನಯಚಂದ್ರ, ಗಾಂಧಿ ಚಿಂತನ ವೇದಿಕೆಯ ವೇದಿಕೆಯ ಪ್ರಧಾನ ಸಂಚಾಲಕ ಹರೀಶ್ ಬಂಟ್ವಾಳ್, ಸಂಚಾಲಕರಾದ ಚಂದ್ರಶೇಖರ ಪೇರಾಲು, ಡಾ.ಸುಂದರ ಕೇನಾಜೆ, ಶರೀಪ್ ಕಂಠಿ, ಶಂಕರ ಪೆರಾಜೆ, ಪ್ರಮುಖರಾದ ಎಂ.ವೆಂಕಪ್ಪ ಗೌಡ, ವಿನಯಕುಮಾರ್ ಕಂದಡ್ಕ, ಎಂ.ಬಿ.ಸದಾಶಿವ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಇ.ರಮೇಶ್ ಮತ್ತಿತರರು ಭಾಗವಹಿಸಿದ್ದರು.









