ಸುಳ್ಯ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದ.ಕ.ಜಿಲ್ಲೆ ಇದರ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಗಾಂಧಿಸ್ಮೃತಿ, ಬೃಹತ್ ಜನಜಾಗೃತಿ ಜಾಥಾ ಮತ್ತು ಸಮಾವೇಶ ಅ.3 ರಂದು ಸುಳ್ಯದ ಅಮರಶ್ರೀಭಾಗ್ ಕುರುಂಜಿ ಜಾನಕಿ ವೆಂಕಟ್ರಮಣ ಸಭಾಭವನದಲ್ಲಿ
ನಡೆಯಲಿದೆ.ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಇಂದು ಧರ್ಮಸ್ಥಳದಲ್ಲಿ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷ ಎನ್.ಎ ರಾಮಚಂದ್ರ, ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯ್ಸ್,ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ
ಅಧ್ಯಕ್ಷ ಲೋಕನಾಥ್ ಆಮೇಚೂರ್, ಜಿಲ್ಲಾ ನಿರ್ದೇಶಕ ಪ್ರವೀಣಕುಮಾರ್, ಸುಳ್ಯ ಕೇಂದ್ರ ಒಕ್ಕೂಟದ ಅಧ್ಯಕ್ಷ ಸುರೇಶ್ ಕಣೆಮರಡ್ಕ, ತಾಲೂಕು ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಮಹೇಶ್ ಕುಮಾರ್ ರೈ ಮೇನಾಲ,
ಭಜನಾ ಪರಿಷತ್ ನಿರ್ದೇಶಕ ಬೂಡು ರಾಧಾಕೃಷ್ಣ ರೈ, ಸುನಿಲ್ ಕೇರ್ಪಳ, ತಾಲೂಕು ಯೋಜನಾಧಿಕಾರಿ ನಾಗೇಶ್ .ಪಿ ಉಪಸ್ಥಿತರಿದ್ದರು