ಸುಳ್ಯ: ಸುಳ್ಯದ ಗಾಂಧಿನಗರದ ಆಟೋರಿಕ್ಷಾ ನಿಲ್ದಾಣದ ಪಾರ್ಕಿಂಗ್ನಲ್ಲಿ ನಿಲ್ಲಿಸಿದ್ದ ರಿಕ್ಷಾಗಳಿಗೆ ಹಾಗೂ ಸ್ಕೂಟರ್ಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದು 3 ಮಂದಿ ಗಾಯಗೊಂಡ ಘಟನೆ ನಡೆದಿದೆ. ಮಡಿಕೇರಿ ಕಡೆಯಿಂದ ಬಂದ ಕಾರು ಪಾರ್ಕಿಂಗ್ನಲ್ಲಿ ನಿಲ್ಲಿಸಿದ ಆಟೋ ರಿಕ್ಷಾಗಳಿಗೆ ಮತ್ತು ಪಕ್ಕದಲ್ಲೇ ನಿಲ್ಲಿಸಿದ್ದ ಸ್ಕೂಟರ್ಗೆ ಡಿಕ್ಕಿ ಹೊಡೆದಿದೆ. ಆಟೋದಲ್ಲಿದ್ದ ಅಟೋ ಚಾಲಕರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ












