ಸುಳ್ಯ: ಸುಳ್ಯ ಗಾಂಧಿನಗರ ಮುನವ್ವಿರುಲ್ ಇಸ್ಲಾಂ ಮದ್ರಸ, ಮುಹಿಯ್ಯದ್ದೀನ್ ಜುಮ್ಮಾ ಮಸ್ಜಿದ್ ತರ್ಭಿಯತುಲ್ ಇಸ್ಲಾಂ ಜಮಾಅತ್ ಕಮಿಟಿ ಆಶ್ರಯದಲ್ಲಿ 80 ನೇ ಸ್ವಾತಂತ್ರ್ಯ ದಿನಾಚಣೆಯ ನ್ನು ಆಚರಿಸಲಾಯಿತು.ಜುಮ್ಮಾ ಮಸ್ಜಿದ್ ಅಧ್ಯಕ್ಷರಾದ
ಹಾಜಿ ಕೆ ಎಂ ಎಸ್ ಮಹಮ್ಮದ್ ಧ್ವಜಾರೋಹಣ ನೆರವೇರಿಸಿದರು.ಖತೀಬರಾದ ಅಲ್ ಹಾಜ್ ಅಶ್ರಫ್ ಖಾಮಿಲ್ ಸಖಾಫಿ ದುವಾ ಪ್ರಾರ್ಥನೆ ಮಾಡಿದರು.
ಮುದರ್ರಿಸರಾದ ಶಿಹಾಬುದ್ದೀನ್ ಅಹ್ಸನಿ,ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ ( ಸೂಡ )ಅಧ್ಯಕ್ಷ ಕೆ.ಎಂ. ಮುಸ್ತಫ ಮಾತನಾಡಿದರು.ವೇದಿಕೆಯಲ್ಲಿ ಎಂಜೆಎಂ ಪದಾಧಿಕಾರಿಗಳಾದ ಅಬ್ದುಲ್ ಹಮೀದ್ ಬೀಜಕೊಚ್ಚಿ, ಹಾಜಿ ಐ. ಇಸ್ಮಾಯಿಲ್, ಹಾಜಿ ಎಸ್. ಎಂ. ಅಬ್ದುಲ್ ಹಮೀದ್, ನಿರ್ದೇಶಕರಾದ ಅಬೂಬಕ್ಕರ್ ಸಿದ್ದೀಕ್ ಕೊಕ್ಕೊ ಉಪಸ್ಥಿತರಿದ್ದರು, ಮದ್ರಸ ಮುಖ್ಯ ಶಿಕ್ಷಕ ಸಿರಾಜುದ್ದೀನ್ ಸಖಾಫಿ ಸ್ವಾಗತಿಸಿದರು.ಮದ್ರಸ ವಿದ್ಯಾರ್ಥಿಗಳಿಂದ ದೇಶ ಭಕ್ತಿಗೀತೆ ಗಾಯನ ನಡೆಯಿತು.







































