ಗಾಂಧಿನಗರ: ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಇದರ ಸಹಯೋಗದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಗಾಂಧಿನಗರದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು
ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ ನೆರವೇರಿಸಿದರು. ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಕಛೇರಿಯ ಡಾ.ಡಾ. ಭವ್ಯಾ ಮನೋಹರ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಭಾರ ಪ್ರಾಂಶುಪಾಲರಾದ ರಾಜೇಶ ಶೆಟ್ಟಿ ಸ್ವಾಗತಿಸಿದರು.
ಹಿರಿಯ ಆರೋಗ್ಯ ಸುರಕ್ಷಾಧಿಕಾರಿ ಕನಕಾಂಗಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಬೇಬಿ, ಸಮುದಾಯ ಆರೋಗ್ಯಾಧಿಕಾರಿ ರಶ್ಮಿ,
ಸಮುದಾಯ ಆರೋಗ್ಯಾಧಿಕಾರಿ ಸುನೀತಾ, ಉಪನ್ಯಾಸಕರು, ಶಾಲಾ ಮಕ್ಕಳು ಉಪಸ್ಥಿತರಿದ್ದರು.








