ಸುಳ್ಯ:ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್ನ ಪಿಯುಸಿ ವಿಭಾಗದಲ್ಲಿ ನೂತನ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಕಾರ್ಯಕ್ರಮ ನಡೆಯಿತು. ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ ಉದ್ಘಾಟಿಸಿ ನೂತನ ವಿದ್ಯಾರ್ಥಿಗಳಿಗೆ
ಶುಭ ಹಾರೈಸಿದರು. ಶಾಲೆಯ ಅಭಿವೃದ್ಧಿಗೆ ಸರಕಾರದಿಂದ ಅನುದಾನ ತರಲು ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಶರೀಫ್ ಕಂಠಿ ಹೇಳಿದರು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾಭಿವೃದ್ಧಿ ಸಮಿತಿ ಕಾರ್ಯಧ್ಯಕ್ಷ ಚಿದಾನಂದ ಕಾಯರ್ತೋಡಿ, ಮಕ್ಕಳು ಉತ್ತಮ ರೀತಿಯಲ್ಲಿ, ಶಿಕ್ಷಣ ಪಡೆದು ಕಲಿತ ಶಾಲೆಗೂ, ಸಮಾಜಕ್ಕೆ ಹಾಗೂ ಹೆತ್ತವರಿಗೆ ಕೀರ್ತಿ ತರಬೇಕು ಎಂದು ಹಾರೈಸಿದರು. ಎಲ್ಲರು ಶಾಲೆಯ ಅಭಿವೃದ್ಧಿಗೆ ಎಲ್ಲರೂ ಒಟ್ಟಾಗಿ ಪಕ್ಷತೀತವಾಗಿ ಶ್ರಮಿಸಬೇಕು ಎಂದು ಹೇಳಿದರು. ಸಭೆಯಲ್ಲಿ ಪ್ರಾoಶುಪಾಲ ಅಬ್ದುಲ್ ಸಮದ್ ಹಾಗೂ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು