ಸುಳ್ಯ: ಸಿದ್ದಿವಿನಾಯಕ ಸೇವಾ ಸಮಿತಿ ಸುಳ್ಯ, ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಸುಳ್ಯ ಇವುಗಳ ಆಶ್ರಯದಲ್ಲಿ 5 ದಿನಗಳ ಕಾಲ ಚೆನ್ನಕೇಶವ ದೇವಸ್ಥಾನದಲ್ಲಿ ನಡೆದ 55 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ವೈಭವದ ಶೋಭಾಯಾತ್ರೆಯೊಂದಿಗೆ
ಸಂಪನ್ನಗೊಂಡಿತು. ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆದ ಗಣೇಶೋತ್ಸವದ ವೈಭವದ ಶೋಭಾಯಾತ್ರೆ ನಗರದಲ್ಲಿ ಸಾಗಿದ ಬಳಿಕ ಪಯಸ್ವಿನಿ ನದಿಯಲ್ಲಿ ಗಣೇಶನ ವಿಗ್ರಹ ಜಲಸ್ತಂಭನಗೊಳಿಸಲಾಯಿತು. ಚೆಂಡೆ, ವಾದ್ಯ ಮೇಳಗಳು, ಕುಣಿತ ಭಜನೆ, ಹುಲಿ ವೇಷ ದೀಪಾಲಂಕಾರಗಳು ಶೋಭಾಯಾತ್ರೆಗೆ ಮೆರುಗು ತಂದಿತು.