ಸುಳ್ಯ:ದಕ್ಷಿಣ ಕನ್ನಡ ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸುಳ್ಯದ ಕೇರ್ಪಳ ಸಂಧ್ಯಾರಶ್ಮಿ ಸಭಾಭವನದಲ್ಲಿ ನಡೆದ ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘ ಸುಳ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘ ಇದರ ಜಂಟಿ ಸಭೆ ಯಲ್ಲಿ ನಡೆಯಿತು. ಡಿ.29 ಮಂಗಳೂರು ಪುರಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ
ಗಾಣಿಗ ಸಮಾಜ ಸೇವಾ ಸಂಘ ಮಂಗಳೂರು ಇದರ ಉದ್ಘಾಟನಾ ಸಮಾರಂಭ ನಡೆಯಲಿದೆ. ರಬ್ಬರ್ ಬೋರ್ಡ್ನ ನಿವೃತ್ತ ಡೆಪ್ಯೂಟಿ ಕಮಿಷನರ್ ಬಾಲಕೃಷ್ಣ ಮಂಗಳೂರು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಸಂಘದ ಅಧ್ಯಕ್ಷ ಚಂದ್ರಶೇಖರ ಪನ್ನೆ ವಹಿಸಿದ್ದರು, ದಕ್ಷಿಣ ಕನ್ನಡ ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ ರಾಮ ಮುಗ್ರೋಡಿ ,ಗೌರವಾಧ್ಯಕ್ಷ ಶಂಕರ ಪಾಟಾಳಿ ಪರಿವಾರಕಾನ, ಉಪಾಧ್ಯಕ್ಷರಾದ ಶಾರದಾಕೃಷ್ಣ ಈಶಾ ಪುತ್ತೂರು, ಪ್ರಧಾನ ಕಾರ್ಯದರ್ಶಿ ಮಹಾಲಿಂಗನ್ ಬಾಜರ್ತೊಟ್ಟಿ, ತಾಲೂಕು ಸಂಘದ ಕಾರ್ಯದರ್ಶಿ ಸಚಿತ್ ಕಲ್ಮಡ್ಕ ತಾಲೂಕು ಸಂಘದ ಮಾಜಿ ಅಧ್ಯಕ್ಷ ನಾರಾಯಣ ನಾವೂರು ಉಪಸ್ಥಿತರಿದ್ದರು.
ಸಭೆಯಲ್ಲಿ ತಾಲೂಕು ಸಂಘ ಹಾಗೂ ಜಿಲ್ಲಾ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಸಮುದಾಯ ಬಾಂಧವರು ಭಾಗಿಯಾಗಿದ್ದರು,
ತಾಲೂಕು ಸಂಘದ ಅಧ್ಯಕ್ಷರಾದ ಚಂದ್ರಶೇಖರ ಪನ್ನೆ ಸ್ವಾಗತಿಸಿ ಕಾರ್ಯದರ್ಶಿ ಸಚಿತ್ ಕಲ್ಮಡ್ಕ ವಂದಿಸಿದರು.