ಪಂಜ:ಕಲ್ಮಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಂಬೆತ್ತಾಡಿ ಗ್ರಾಮದ ಗರಡಿ-ಕಾಚುಕುಜುಂಬ ದೈವಸ್ಥಾನ ರಸ್ತೆ ಕಾಂಕ್ರಿಟೀಕರಣ ಕಾಮಗಾರಿಗೆ ಗ್ರಾಮ ಪಂಚಾಯತ್ ವತಿಯಿಂದ ರೂ. 3 ಲಕ್ಷ ಅನುದಾನ ಮಂಜೂರಾಗಿದ್ದು ಈ ಕಾಮಗಾರಿಯ ಗುದ್ದಲಿಪೂಜೆ ಕಾರ್ಯಕ್ರಮ ಏ11 ರಂದು ನಡೆಯಿತು. ಕಲ್ಮಡ್ಕ ಗ್ರಾಮ ಪಂಚಾಯತ್
ಅಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ ಗುದ್ದಲಿ ಪೂಜೆ ನೆರವೇರಿಸಿದರು. ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ಗ್ರಾಮ ಪಂಚಾಯತ್ ಸದಸ್ಯರಾದ ಪವಿತ್ರ ಮಲ್ಲೆಟ್ಟಿ, ಜಯಲತಾ, ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸಂತೋಷ್ ಕುಮಾರ್ ರೈ, ಧರ್ಮಣ್ಣ ನಾಯ್ಕ ಗರಡಿ, ಸುಳ್ಯ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಉಪಾಧ್ಯಕ್ಷೆ ಪುಷ್ಪಾ ಡಿ ಪ್ರಸಾದ್ ಕಾನತ್ತೂರ್,ಗುತ್ತಿಗೆದಾರ ಗಣೇಶ್ ಭೀಮಗುಳಿ, ಹೊನ್ನಪ್ಪ ಗರಡಿ,ರವಿ ಗರಡಿ, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಊರವರು ಉಪಸ್ಥಿತರಿದ್ದರು.