ಮಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ದ.ಕ.ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ ಅವರ ಕಚೇರಿ ಆ.14 ರಂದು ನಗರದ ಉರ್ವ ಸ್ಟೋರ್ನ ದ.ಕ.ಜಿಲ್ಲಾ ಪಂಚಾಯತ್ ಕಟ್ಟಡದಲ್ಲಿ ಉದ್ಘಾಟನೆಗೊಂಡಿತು. ಕಮ್ಮಾರಿಕೆ ವೃತ್ತಿ ನಡೆಸುವ ಮೂಲಕ ಕಾಯಕ ಯೋಗಿನಿ ಎಂದು ಗುರುತಿಸಿಕೊಂಡಿರುವ ಸುಳ್ಯ ತಾಲೂಕಿನ
ಗುತ್ತಿಗಾರಿನ ಲೀಲಾವತಿ ಅಪ್ಪಯ್ಯ ಆಚಾರ್ಯ ಅವರು ಕಚೇರಿ ಉದ್ಘಾಟಿಸಿದರು.ಡಿಸಿಸಿ ಅಧ್ಯಕ್ಷ ಕೆ.ಹರೀಶ್ ಕುಮಾರ್, ಮಾಜಿ ಶಾಸಕ ಜೆ.ಆರ್.ಲೋಬೊ, ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಹೀದ್ ತೆಕ್ಕಿಲ್ ಮಾತನಾಡಿದರು.ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಧನಂಜಯ ಅಡ್ಪಂಗಾಯ, ರಾಜೀವಿ ಆರ್. ರೈ, ಗೇರುಬೀಜ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಅರೆ ಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಕಾಂಗ್ರೆಸ್ ಮುಖಂಡರಾದ ಜಿ.ಕೃಷ್ಣಪ್ಪ, ಪಿ.ಸಿ. ಜಯರಾಮ್, ನಿತ್ಯಾನಂದ ಮುಂಡೋಡಿ, ಮಹಮ್ಮದ್ ಇಕ್ಬಾಲ್ ಎಲಿಮಲೆ, ಕೆ .ಪಿ.ಥಾಮಸ್, ಸುಧೀರ್ ಕುಮಾರ್ ಶೆಟ್ಟಿ, ಶಾಹುಲ್ ಹಮೀದ್ ಕುತ್ತಮೊಟ್ಟೆ, ಸಿದ್ದಿಕ್ ಕೊಕ್ಕೊ, ರಂಜಿತ್ ರೈ ಮೇನಾಲ, ಕರುಣಾಕರ ಅಡ್ಪಂಯ ಮೊದಲಾದವರು ಉಪಸ್ಥಿತರಿದ್ದರು.
ಪ್ರಾಧಿಕಾರದ ಉಪಾಧ್ಯಕ್ಷ ಜೋಕಿಂ ಡಿಸೋಜ ವಂದಿಸಿದರು.