ಸುಳ್ಯ:ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕನಕಮಜಲು ಗ್ರಾಮದ ಕೋಡಿ ತಿರುವಿನಲ್ಲಿ ಗ್ಯಾಸ್ ಸಿಲಿಂಡರ್ ಸಾಗಾಟ ಲಾರಿ ಪಲ್ಟಿಯಾದ ಘಟನೆ ಜೂ.10ರಂದು ಸಂಜೆ ಸಂಭವಿಸಿದೆ. ಇದರಿಂದ ಕೆಲ ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತಡೆ ಉಂಟಾಗಿದೆ. ಮಡಿಕೇರಿ ಕಡೆಯಿಂದ
ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಮಳೆಗೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಮಡಿಕೇರಿಯಿಂದ ಮಂಗಳೂರಿಗೆ ಗ್ಯಾಸ್ ತುಂಬಿಸಿಕೊಳ್ಳುವುದಕ್ಕೆ ಸಾಗುತ್ತಿದ್ದ ಸಿಲಿಂಡರ್ ತುಂಬಿದ ಲಾರಿ ರಸ್ತೆಯಲ್ಲಿ ನಿಯಂತ್ರಣ ತಪ್ಪಿದೆ. ರಸ್ತೆಗೆ ಬಿದ್ದ ರಭಸಕ್ಕೆ ಒಂದು ಸಿಲಿಂಡರ್ ನಲ್ಲಿ ಉಳಿಕೆಯಾಗಿದ್ದ ಗ್ಯಾಸ್ ಸೋರಿಕೆಯಾಗಿದೆ. ಇದರಿಂದ ಆತಂಕ ಸೃಷ್ಠಿಯಾಯಿತು. ಸುಳ್ಯದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಕಾರ್ಯಾಚರಣೆ ನಡೆಸಿ, ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.