ಸುಳ್ಯ:ಬಿಜೆಪಿ ನಾಯಕ ಸಿ.ಟಿ. ರವಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಆಕ್ಷೇಪಾರ್ಹ ಮಾತುಗಳನ್ನು ಆಡಿರುವುದು ಖಂಡನೀಯ, ಇದು ನಾಡಿನ ಸಮಸ್ತ ಸ್ತ್ರೀ ಕುಲಕ್ಕೆ ಮಾಡಿದ ಅಪಮಾನ ಎಂದು ಸುಳ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್ ಹೇಳಿದ್ದಾರೆ. ಮಹಿಳೆಯ ವಿರುದ್ಧ ಇಂತಹ ನಿಂದನೀಯ
ಮಾತುಗಳನ್ನು ಯಾವುದೇ ಸಮಾಜ ಒಪ್ಪುವುದಿಲ್ಲ. ಪ್ರಜಾಪ್ರಭುತ್ವದ ದೇವಾಲಯವೊಂದರಲ್ಲಿ ಇದೊಂದು ದೊಡ್ಡ ಘಟನೆ ನಡೆದಿದೆ. ಪರಿಷತ್ತಿನ ಕಲಾಪದಲ್ಲಿ ನಡೆದ ಈ ಘಟನೆ ಇಡೀ ನಾಗರೀಕ ಸಮಾಜ ತಲೆ ತಗಿಸುವಂತಾಗಿದೆ ಎಂದು ಹೇಳಿದರು. ಸಿಟಿ ರವಿಯವರನ್ನು ವಿಧಾನ ಪರಿಷತ್ ಸ್ಥಾನದಿಂದ ವಜಾ ಮಾಡಬೇಕು ಎಂದು ಸುಳ್ಯ ಕಾಂಗ್ರೆಸ್ ಮಹಿಳಾ ಘಟಕ ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.